ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

Spread the love

ವ್ಯಾಟಿಕನ್ ಸಿಟಿ: ಪೋಪ್ ಫ್ರಾನ್ಸಿಸ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ವಿಶ್ವ ಕೆಥೊಲಿಕ್ ಸಮುದಾಯದ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ವ್ಯಾಟಿಕನ್ ಸಿಟಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ರೋಮ್ ನ ವ್ಯಾಟಿಕನ್ ಸಿಟಿಯಲ್ಲಿ ನಡದ ಅಂ ತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನದಲ್ಲಿ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

‘ಮಾನವೀಯತೆಗಾಗಿ ಧರ್ಮಗಳ ಒಗ್ಗಟ್ಟು’ ಎಂಬ ವಿಷಯದಲ್ಲಿ ನಡೆದ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದ ಸ್ಪೀಕರ್ ಯು.ಟಿ.ಖಾದರ್ ಧರ್ಮದ ಕುರಿತು ತಮ್ಮ ನಿಲುವನ್ನು ಮಂಡಿಸಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳು ಮೊದಲ ಅಂತಾರಾಷ್ಟ್ರೀಯ ಸರ್ವಧರ್ಮ ಸಮ್ಮೇಳನವನ್ನು ಆಯೋಜಿಸಿ ಶತಮಾನೋತ್ಸವ ಸಂದ ಸ್ಮರಣಾರ್ಥ ಈ ಸಮ್ಮೇಳನವನ್ನು ವ್ಯಾಟಿಕನ್ ಸಿಟಿಯ ಆಗಸ್ತಿನ್ಯೇನಮ್ ನಲ್ಲಿ ಆಯೋಜಿಸಲಾಗಿತ್ತು. ವಿಶ್ವಾದ್ಯಂತವಿರುವ ವಿವಿಧ ಧರ್ಮಗಳ ಗಣ್ಯರು ಭಾಗವಹಿಸಿದ್ದರು.


Spread the love
Subscribe
Notify of

0 Comments
Inline Feedbacks
View all comments