Home Mangalorean News Kannada News ವ್ಯಾಪಕ ಮಳೆ: ಜೂ.27ರಂದು ದಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ

ವ್ಯಾಪಕ ಮಳೆ: ಜೂ.27ರಂದು ದಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ

Spread the love

ವ್ಯಾಪಕ ಮಳೆ: ಜೂ.27ರಂದು ದಕ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿ  ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಸಾರಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾವಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ, ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು,

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು


Spread the love

Exit mobile version