ಶಾಂತಿಯುತ ಚುನಾವಣೆ- ಸಚಿವ ಖಾದರ್ ಅಭಿನಂದನೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಶಾಂತಿಯುತ ಮತ್ತು ಸೌಹಾರ್ದತೆಯಿಂದ ಚುನಾವಣೆ ನಡೆಸಿದ್ದಕ್ಕೆ ಎಲ್ಲಾ ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ, ಮುಖಂಡರು ಮತ್ತು ಕಾರ್ಯಕರ್ತರಿಗೆ, ಪಕ್ಷೇತರ ಅಭ್ಯರ್ಥಿಗಳು, ಕಾರ್ಯಕರ್ತರಿಗೆ ರಾಜ್ಯ ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾಂದರ್ ಕೃತಜ್ಞತೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಮತದಾರರು ಮತ ಚಲಾಯಿಸಿದ್ದು, ಜಿಲ್ಲೆಯ ಎಲ್ಲಾ ಮತದಾರ ಬಾಂಧವರಿಗೆ ಅಭಿನಂದನೆ ಸಲ್ಲಸುವುದರೊಂದಿಗೆ ಚುನಾವಣೆಯನ್ನು ಅತ್ಯಂತ ಸುಸಜ್ಜಿತವಾಗಿ ಸಕಲ ಸೌಲಭ್ಯದೊಂದಿಗೆ ನಿರ್ವಹಿಸಿದ ದ.ಕ. ಜಿಲ್ಲಾಡಳಿತ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸರಕಾರಿ ನೌಕರರ, ಪೊಲೀಸ್-ರಕ್ಷಣಾ ಇಲಾಖೆ ಸಿಬ್ಬಂದಿಗಳ ಕಾರ್ಯ ಶ್ಲಾಘಿಸಿದ್ದಾರೆ.