ಶಾಸಕ ಕಾಮತ್ ಅವರಿಂದ ದಿನವೀಡಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ
ಮಂಗಳೂರು: ಮಂಗಳೂರಿನಲ್ಲಿ ಸುರಿದ ಮಳೆಗೆ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಿಸಿದರು.
ನಂತರ ತಕ್ಷಣ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದರು. ಮಂಗಳೂರು ಮಹಾನಗರದ ಬೋಳೂರು, ಕುದ್ರೋಳಿ, ಬೊಕ್ಕಪಟ್ಣ, ಬೋಳೂರಿನ ಪರವು, ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರ ಸಂಕಷ್ಟವನ್ನು ಶಾಸಕ ಕಾಮತ್ ಆಲಿಸಿ ಸ್ಥಳದಲ್ಲಿಯೇ ಸೂಕ್ತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಜಗದೀಶ್ ಶೆಟ್ಟಿ, ವಸಂತ ಜೆ ಪೂಜಾರಿ, ರಾಹುಲ್ ಸಹಿತ ಅನೇಕ ಜನ ಕಾರ್ಯಕರ್ತರು ಉಪಸ್ಥಿತರಿದ್ದರು.