ಸಂಭ್ರಮದ ವಿಟ್ಲಪಿಂಡಿ ಉತ್ಸವ ಸಂಪನ್ನ
ಉಡುಪಿ: ಶ್ರೀಕೃಷ್ಣನ ಜನ್ಮವನ್ನು ಸ್ಮರಿಧಿಸುವ, ಸಂಭ್ರಮಿಸುವ ವಿಟ್ಲಪಿಂಡಿ ಉತ್ಸವ ಶ್ರೀಕೃಷ್ಣ ಮಠಧಿದಲ್ಲಿ ಶುಕ್ರವಾರ ವೈಭವದಿಂದ ಸಂಪನ್ನಗೊಂಡಿತು.
ಉಡುಪಿಯ ರಥ ಬೀದಿ ಶುಕ್ರವಾರ ಜನರಿಂದ ತುಂಬಿ ಹೋಗಿತ್ತು. ವಿಟ್ಲಪಿಂಡಿ ಉತ್ಸವ ವೀಕ್ಷಿಸಲು ಜನರು ಬೆಳಗ್ಗೆಯಿಂದಲೇ ಕಾದು ಕುಳಿತಿದ್ದರು. ಮಧ್ಯಾಹ್ನದ ವೇಳೆಗೆ ರಥ ಬೀದಿಯಯಲ್ಲಿ ಸಂಭ್ರಮದಿಂದ ವಿಟ್ಲಪಿಂಡಿ ಉತ್ಸವ ಆರಂಭವಾಯಿತು. ಕೃಷ್ಣ ಜನ್ಮಾಷ್ಟಮಿ ಮರುದಿನ ಶ್ರೀ ಕೃಷ್ಣನ ಬಾಲಲೀಲೆಗಳನ್ನು ನೆನಪು ಮಾಡಿಕೊಳ್ಳುವ ಉದ್ದೇಶದಿಂದ ವಿಟ್ಲಪಿಂಡಿ ಉತ್ಸವ ಆಚರಿಸಲಾಗುತ್ತದೆ.
ಉಡುಪಿಯ ರಥ ಬೀದಿ ಮಂಗಳವಾರ ಜನರಿಂದ ತುಂಬಿ ಹೋಗಿತ್ತು. ವಿಟ್ಲಪಿಂಡಿ ಉತ್ಸವ ವೀಕ್ಷಿಸಲು ಜನರು ಬೆಳಗ್ಗೆಯಿಂದಲೇ ಕಾದು ಕುಳಿತಿದ್ದರು. ಮಧ್ಯಾಹ್ನದ ವೇಳೆಗೆ ರಥ ಬೀದಿಯ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿದ ನಂತರ ಸಂಭ್ರಮದಿಂದ ವಿಟ್ಲಪಿಂಡಿ ಉತ್ಸವ ಆರಂಭವಾಯಿತು. ಕೃಷ್ಣ ಜನ್ಮಾಷ್ಟಮಿ ಮರುದಿನ ಶ್ರೀ ಕೃಷ್ಣನ ಬಾಲಲೀಲೆಗಳನ್ನು ನೆನಪು ಮಾಡಿಕೊಳ್ಳುವ ಉದ್ದೇಶದಿಂದ ವಿಟ್ಲಪಿಂಡಿ ಉತ್ಸವ ಆಚರಿಸಲಾಗುತ್ತದೆ.
ಶುಕ್ರವಾರ ಮುಂಜಾವ ಶ್ರೀಕೃಷ್ಣ- ಮುಖ್ಯಪ್ರಾಣರಿಗೆ ಪರ್ಯಾಯ ಶ್ರೀಪಾದರು ಪೂಜೆ ಸಲ್ಲಿಸಿದ ಬಳಿಕ ಸಾರ್ವಜನಿಕಧಿರಿಗೆ ಅನ್ನಸಂತರ್ಪಣೆ ನಡೆಯಿತು.
ಶ್ರೀಕೃಷ್ಣ ಲೀಲೊತ್ಸವದ ವೈಭವದ ಶೋಭಾ ಯಾತ್ರೆಯಲ್ಲಿ ಪರ್ಯಾಯ ಪೇಜಾವರ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮಿಜಿ ಹಾಗೂ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಗಳೊಂದಿಗೆ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥಸ್ವಾಮಿಜಿ ಭಾಗವಹಿಸಿದ್ದರು.
ನೆಟ್ಟ ಗುರ್ಜಿಗಳಲ್ಲಿ ತೂಗು ಹಾಕಿದ ಒಂದೊಂದೆ ಮಡಕೆಧಿಗಳನ್ನು ಸಾಂಪ್ರದಾಯಿಕ ಗೊಲ್ಲರ ವೇಷ ಧರಿಸಿದವರು ಒಡೆಯುತ್ತ ಮುಂದೆ ಸಾಗಿಧಿದಂತೆ ಮೆರವಣಿಗೆ ಮುಂದೆ ಸಾಗಿತು. ಕೊನೆಯಲ್ಲಿ ಶ್ರೀಕೃಷ್ಣನ ಮಣ್ಣಿನ ಮೂರ್ತಿಯನ್ನು ಮಧ್ವ ಸರೋವರದಲ್ಲಿ ವಿಸರ್ಜಿಸಲಾಯಿತು.