ಸಂವಿಧಾನವನ್ನು ಉಳಿಸಿ ಬೆಳೆಸಿದರೆ ಮಾತ್ರ ದೇಶದ ಬದಲಾವಣೆ ಸಾಧ್ಯ”:ಇಂಡಿಯನ್ ಸೋಶಿಯಲ್ ಫೋರಂ

Spread the love

 ಸಂವಿಧಾನವನ್ನು ಉಳಿಸಿ ಬೆಳೆಸಿದರೆ ಮಾತ್ರ ದೇಶದ ಬದಲಾವಣೆ ಸಾಧ್ಯ”:ಇಂಡಿಯನ್ ಸೋಶಿಯಲ್ ಫೋರಂ

ದಮಾಮ್: ನಾವು ಭಾರತೀಯರು 1950, ಜನವರಿ 26 ರಂದು ಅಸ್ತಿತ್ವಕ್ಕೆ ಬಂದಿರುವ ವಿಶ್ವದ ಶ್ರೇಷ್ಠ ಪ್ರಜಾಪ್ರಭುತ್ವ ಸಂವಿಧಾನವನ್ನು ಪಾಲಿಸುವವರಾಗಿದ್ದೇವೆ. ಡಾ. ಬಿ.ಆರ್. ಅಂಬೇಡ್ಕರ್ ಮುಂದಾಳತ್ವದಲ್ಲಿ ನಿರ್ಮಾಣಗೊಂಡ ಭಾರತದ ಸಂವಿಧಾನವು ವಿಶ್ವದಲ್ಲೇ ಅತ್ಯುತ್ತಮವಾಗಿದ್ದು ಭಾರತವನ್ನು ಸಮಾಜವಾದಿ, ಜಾತ್ಯತೀತ ಗಣರಾಜ್ಯವೆಂದು ಸಾರುತ್ತದೆ. ಇದು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕನ್ನು ಪ್ರತಿಪಾದಿಸುತ್ತದೆ. ಅದಕ್ಕಾಗಿ ಪ್ರಜೆಗಳು, ಪ್ರಜೆಗಳಿಂದ, ಪ್ರಜೆಗಳಿಗಾಗಿ ಸರಕಾರ ರಚಿಸಿಕೊಳ್ಳುವ ವ್ಯವಸ್ಥೆಯನ್ನು ಸಂವಿಧಾನ ನಾಗರಿಕರಿಗೆ ಕಲ್ಪಿಸಿಕೊಟ್ಟಿದೆ. ಸೌದಿ ಅರೇಬಿಯದಲ್ಲಿರುವ ಎಲ್ಲ ಅನಿವಾಸಿ ಭಾರತೀಯರಿಗೆ, ಇಂಡಿಯನ್ ಸೋಶಿಯಲ್ ಫೋರಂ ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ಘಟಕವು ಗಣರಾಜ್ಯೋತ್ಸವದ ಶುಭಾಶಯಗಳನ್ನು ಸಲ್ಲಿಸುತ್ತದೆ.

ಸಾಮಾಜಿಕ ನ್ಯಾಯ ಎಂಬುದು ದೇಶದ ಸಂವಿಧಾನದ ಮೂಲ ಧ್ಯೇಯವಾಗಿದ್ದು, ಇಂದು ಅದು ಎಲ್ಲ ಕ್ಷೇತ್ರಗಳಲ್ಲಿ ಜಾತಿ, ಧರ್ಮ, ವರ್ಗಗಳ ಹೆಸರಿನಲ್ಲಿ ನಿರಾಕರಿಸಲ್ಪಡುತ್ತಿರುವುದನ್ನು ಕಾಣುತ್ತಿದ್ದೇವೆ. ದೇಶದ ಆರ್ಥಿಕ ವ್ಯವಸ್ಥೆ, ಭದ್ರತೆ, ಕೋಮುವಾದ, – ದೌರ್ಜನ್ಯ , ಅಸಹಿಷ್ಣುತೆ, ಅದೇ ರೀತಿ ಪ್ರಗತಿಪರರ ಸರಣಿ ಹತ್ಯೆಗಳು ದೇಶ ವಿದೇಶಗಳಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದ್ದು ಮಾತ್ರವಲ್ಲದೆ ಇತ್ತೀಚೆಗೆ ನಡೆದ ಧರ್ಮ ಸಂಸತ್ ನಲ್ಲಿ ಹಾಗೂ ಸರಕಾರದ ಪ್ರತಿನಿಧಿಯೆನಿಸಿ ಕೊಂಡವರ ಸಂವಿದಾನ ವಿರೋಧಿ ಹೇಳಿಕೆಗಳನ್ನು ಗಮನಿಸಿದರೆ ದೇಶದ ಬಹುತ್ವದ ಸಂಸ್ಕೃತಿಯನ್ನು ಬುಡಮೇಲು ಗೊಳಿಸಿ ಧ್ವೇಷ ಮತ್ತು ಹಿಂಸೆಯ ಸಿದ್ಧಾಂತವನ್ನು ಹೇರುವ ಆತಂಕವು ದೇಶವನ್ನು ಕಾಡುತ್ತಿದೆ.

ಪ್ರಸಕ್ತ ಭಾರತದಲ್ಲಿ ಜನಸಾಮಾನ್ಯರು, ದಲಿತರು, ಅಲ್ಪಸಂಖ್ಯಾತರು, ಆದಿವಾಸಿಗಳು, ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದ ಹೊರತಾಗಿ ಸಾಮಾಜಿಕ ನ್ಯಾಯವನ್ನು ಖಾತರಿಪಡಿಸಲು ಸಾಧ್ಯವಿಲ್ಲ.ಆದ್ದರಿಂದ ಮಾನವಪರ ಕಾಳಜಿಯುಳ್ಳ, ಅಂಬೇಡ್ಕರ್ ರಚಿಸಿದ ನಮ್ಮ ಸಂವಿಧಾನವನ್ನು ಉಳಿಸಿ ಬೆಳೆಸಿದರೆ ಮಾತ್ರ ಈ ದೇಶದ ಬದಲಾವಣೆ ಸಾಧ್ಯ , ಇದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯ ಕೂಡ ಆಗಿದೆ. ಈ ನಿಟ್ಟಿನಲ್ಲಿ ಸಂವಿಧಾನದ ಧ್ಯೇಯೋದ್ದೇಶ, ಆಶೋತ್ತರಗಳನ್ನು ಕಾರ್ಯರೂಪಕ್ಕೆ ತರಲು ತನ್ನ ಕರ್ತವ್ಯ ಎಂಬ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕಾಗಿದೆ. ಎಂದು ಈ ಸಂದರ್ಭದಲ್ಲಿ ಇಂಡಿಯನ್ ಸೋಶಿಯಲ್ ಫೋರಂ ಆಶಿಸುತ್ತದೆ.


Spread the love