ಸಂವಿಧಾನ ಜಾಗೃತಿ ತೀವ್ರಗೊಳಿಸಲು  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

Spread the love

ಸಂವಿಧಾನ ಜಾಗೃತಿ ತೀವ್ರಗೊಳಿಸಲು  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

ಮಂಗಳೂರು:  ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಎಲ್ಲಾ ಕಡೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂವಿಧಾನ  ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕಾ ಖರ್ಗೆ ಅವರು ಜಂಟಿಯಾಗಿ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯ ಬಳಿಕ ಅಧಿಕಾರಿಗಳೊಂದಿಗೆ ಮಾತನಾಡಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಡಿ ವಿವಿಧ ತಂಡಗಳನ್ನು ರಚಿಸಿಲಾಗಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ  ಬೀದಿನಾಟಕಗಳ ಮೂಲಕ ಜನರಿಗೆ ಸಂವಿಧಾನ ಪರಿಕಲ್ಪನೆಗಳ ಬಗ್ಗೆ ಅರಿವು ಮೂಡಲಾಗುತ್ತಿದೆ ಎಂದು  ಸಚಿವರಿಗೆ ತಿಳಿಸಿದರು.

ಈಗಾಗಲೇ ಸಂವಿಧಾನ ಜಾಗೃತಿ ಜಾಥಾಕ್ಕೆ ವಿವಿಧ ಕಡೆ ಉತ್ತಮ ಸ್ಪಂದನೆ ದೊರಕಿದೆ. ಈ ಜಾಗೃತಿ ಜಾಥಾದಲ್ಲಿ ಜಿಲ್ಲೆಯಾದ್ಯಂತ ಸಂವಿಧಾನದ ವಿವಿಧ ಅಂಶಗಳ ಮಹತ್ವ ಸಾರುವ ಆಕರ್ಷಕ ಸ್ಥಬ್ಧಚಿತ್ರ ಹಾಗೂ ಕಲಾ ತಂಡಗಳ ಪ್ರದರ್ಶನ ನಡೆಸಲಾಗುತ್ತಿದೆ   ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಲತಿ, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷ ಅಧಿಕಾರಿ ದೇವಿಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love