ಸಂಸದ ಕೋಟ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ; ಪ್ರಕರಣ ದಾಖಲು

Spread the love

ಸಂಸದ ಕೋಟ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕೆ ಬೇಡಿಕೆ; ಪ್ರಕರಣ ದಾಖಲು

ಉಡುಪಿ: ಉಡುಪಿ ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಕುರಿತು ಸಂಸದರ ವಕೀಲರಾದ ಶ್ಯಾಮಸುಂದರ ನಾಯರಿಯವರು ಪೊಲೀಸರಿಗೆ ದೂರು ನೀಡಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ  ಕೋಟ ಶ್ರೀನಿವಾಸ ಪೂಜಾರಿರವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದು ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿರುತ್ತಾರೆ. ಶ್ರೀ ಕೋಟ ಶ್ರೀನಿವಾಸ ಪೂಜಾರಿರವರ ಅಧಿಕೃತ ಸಾಮಾಜಿಕ ಜಾಲತಾಣಗಳಿಂದ ಅವರ ಫೋಟೋ ಹಾಗೂ ಮಾಹಿತಿಗಳನ್ನು ದುರುಪಯೋಗಪಡಿಸಿಕೊಂಡು ದುರುದ್ದೇಶಪೂರ್ವಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಉದ್ದೇಶದಿಂದ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ  ಕೋಟ ಶ್ರೀನಿವಾಸ ಪೂಜಾರಿರವರ ಹೆಸರನ್ನು ಕೆಡಿಸುವ ಉದ್ದೇಶದಿಂದ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ದೂರಿನಲ್ಲಿ ಕೋರಿಕೊಂಡಿದ್ದಾರೆ.

ಈ ಕುರಿತು ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯಿದೆ 2008 ರ ಪ್ರಕಾರ ಪ್ರಕರಣ ದಾಖಲಾಗಿದೆ


Spread the love