ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ  ಅಕಾಡೆಮಿಯ ವತಿಯಿಂದ ಸನ್ಮಾನ

Spread the love

ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಯು.ಟಿ.ಖಾದರ್ ಅವರಿಗೆ  ಅಕಾಡೆಮಿಯ ವತಿಯಿಂದ ಸನ್ಮಾನ

ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು.

ಖಾದರ್ ಅವರಿಗೆ ಸಾಲು ಹಾಗೂ ಪುಸ್ತಕ ಮತ್ತು ಸ್ಮರಣಿಕೆ ನೀಡಿ, ಅಭಿನಂದಿಸಿದರು.

ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.


Spread the love