ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಬದ್ಧತೆ ಇರಲಿ : ಹರ್ಷೇಂದ್ರ ಕುಮಾರ್
ಉಜಿರೆ: ವಿದ್ಯಾರ್ಥಿಗಳು ಶಿಕ್ಷಣ ಪೂರೈಸಿ ಉದ್ಯೋಗಕ್ಕೆ ಸೇರಿದ ಬಳಿಕ ಸಮಾಜಮುಖಿ ಸೇವಾಕಾರ್ಯಗಳಲ್ಲಿ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು.
ಅವರು ಶುಕ್ರವಾರ ಉಜಿರೆಯಲ್ಲಿ ಎಸ್.ಡಿ.ಎಂ. ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಎಸ್.ಡಿ.ಎಂ. ಎಜ್ಯುಕೇಶನಲ್ ಟ್ರಸ್ಟ್ ವತಿಯಿಂದ ತೊಂಬತ್ತು ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.
ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು ಅದರ ಸದುಪಯೋಗ ಮಾಡಿ ಮುಂದೆ ಇತರ ವಿದ್ಯಾರ್ಥಿಗಳಿಗೆ ನೆರವು ನೀಡಬೇಕು. ಅದೇ ನೀವು ಸಂಸ್ಥೆಗೆ ನೀಡುವ ಕೊಡುಗೆ ಎಂದು ಅವರು ಹೇಳಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್. ಪ್ರಭಾಕರ್ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಪ್ರಾಸ್ತಾವಿಕವಾಗಿ ಮಾತನಾಡಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಎಸ್. ಮೋಹನನಾರಾಯಣ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾ¯ನಾ ಅಧಿಕಾರಿ ಸೋಮಶೇಖರ ಶೆಟ್ಟಿ ಸ್ವಾಗತಿಸಿದರು.