ಸಮಾಜ ಸೇವಕ ಇಕ್ಬಾಲ್ ಮನ್ನಾಗೆ ‘ಸ್ವಾಮಿ ವಿವೇಕಾನಂದ’ ರಾಜ್ಯ ಪ್ರಶಸ್ತಿ ಪ್ರದಾನ
ಉಡುಪಿ: ವಿಶ್ವ ಮಾನವಾಧಿಕಾರ ಹಕ್ಕು ಲೋಕ ಪರಿಷತ್ ವತಿಯಿಂದ ರವಿವಾರ ಉಡುಪಿ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆದ ನೂತನ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಎಂ.ಇಕ್ಬಾಲ್ ಮನ್ನಾ ಅವರಿಗೆ ಪ್ರತಿಷ್ಠಿತ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಪರಿಷತ್‌ನ ಅಧ್ಯಕ್ಷ ಡಾ.ಶಂಕರ್ ಶೆಟ್ಟಿ ವಹಿಸಿದ್ದರು. ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ನೂತನ ಜಿಲ್ಲಾಧ್ಯಕ್ಷ ಎಂ.ಇಕ್ಬಾಲ್ ಕುಂಜಿಬೆಟ್ಟು ಸಹಿತ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿದರು.
ಮುಖ್ಯ ಅತಿಥಿಗಳಾಗಿ ಪರಿಷತ್ ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ ಹಾಗೂ ನಿಯೋಜಿತ ರಾಜ್ಯ ಕಾನೂನು ಸಲಹೆಗಾರ ಶ್ಯಾಮ್ ಸುಂದರ್ ನಾಯರಿ, ಸಾಮಾಜಿಕ ಕಾರ್ಯಕರ್ತ ಎಂ.ಫಾರೂಕ್, ವಕೀಲ ಅಖಿಲ ಬಿ.ಹೆಗ್ಡೆ ಮಾತನಾಡಿದರು.
ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದೇವೇಂದ್ರ ಸುವರ್ಣ, ಜೊತೆ ಕಾರ್ಯದರ್ಶಿ ಸದಾಶಿವ ಕೋಟೆಗಾರ್, ಕಾನೂನು ಸಲಹೆಗಾರ ಹರ್ಷರಾಜ್ ಉಪಸ್ಥಿತರಿದ್ದರು. ಶಿವಕುಮಾರ್ ಶೆಟ್ಟಿಗಾರ್ ಸ್ವಾಗತಿಸಿದರು. ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿ ವಂದಿಸಿದರು