ಸರಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್

Spread the love

ಸರಕಾರದ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ : ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ: ರಾಜ್ಯ ಸರಕಾರದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳು ಸರಕಾರಕ್ಕೆ ಹಾಗೂ ಜನರ ಮಧ್ಯ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು. ಸರಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮೂಲಕ ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಯಶಸ್ವಿಗೊಳಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಅವರು ಇಂದು ನಗರದ ತಾಲೂಕು ಪಂಚಾಯತ್ ಕಟ್ಟಡದಲ್ಲಿ ರಾಜ್ಯ ಸರಕಾರದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜನ ಸಾಮಾನ್ಯರ ಜೀವನಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿದೆ. ಅಭಿವೃದ್ಧಿಗಳ ಜೊತೆಗೆ ಮಹಿಳೆಯರಿಗೆ, ಮಕ್ಕಳಿಗೆ, ಯುವಕರಿಗೆ ಅವರ ಆರ್ಥಿಕ ಸಬಲೀಕರಣಕ್ಕೆ ಸಹಾಯಮಾಡುತ್ತಿದೆ. ಸರಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದರೊಂದಿಗೆ ಜನಸಾಮಾನ್ಯರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಮನೆ ಬಾಗಿಲಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗೋಣ ಎಂದರು.

ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು. ಬೇರೆ ರಾಜ್ಯಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ‌ಜಾರಿಗೆ ತರಲಾಗುತ್ತಿದೆ. ಭಾರತದ ಬದಲಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ. ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಅನುಷ್ಠಾನ ಸಮಿತಿಗಳು ಜನರಿಗೆ ಮುಟ್ಟಿಸಲಿ, ರಾಜ್ಯದ ಯೋಜನೆಗಳು ಜನರಿಗೆ ತಲುಪುವಂತಾಗಲಿ ಎಂದರು.

ಇದೇ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಗುರುತಿನ ಚೀಟಿ ವಿತರಿಸಿದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಎಲ್ಲಾ ಅನುಷ್ಠಾನ ಸಮಿತಿಯ ಸದಸ್ಯರುಗಳು, ಫಲಾನುಭವಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Spread the love