Home Mangalorean News Kannada News ಸರಕಾರಿ ಕರ್ತವ್ಯಕ್ಕೆ ಅಡ್ಡಿ ; ಬಂಧನ

ಸರಕಾರಿ ಕರ್ತವ್ಯಕ್ಕೆ ಅಡ್ಡಿ ; ಬಂಧನ

Spread the love

ಸರಕಾರಿ ಕರ್ತವ್ಯಕ್ಕೆ ಅಡ್ಡಿ ; ಬಂಧನ

ಮಂಗಳೂರು : ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಮಂಗಳೂರು ಸಿಸಿಬಿ ಪೋಲಿಸರು ಬುಧವಾರ ಬಂಧಿಸಿದ್ದಾರೆ.

ಬಂಧಿತನನ್ನು ಬಜ್ಪೆ ಶಾಂತಿಗುಡ್ಡೆ ನಿವಾಸಿ ರೌಡಿ ಶೀಟರ್ ಅಬ್ದುಲ್ ಮುನೀರ್ (22) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 22 ರಂದು ಮುಖ್ಯಮಂತ್ರಿ ದಕ ಜಿಲ್ಲೆಗೆ ಭೇಟಿ ನೀಡಿದಾಗ ಮಂಗಳೂರು ನಗರ ಸಂಚಾರ ಉತ್ತರ ಉಪವಿಭಾದ ಪೋಲಿಸ್ ಅಧಿಕಾರಿ ಮಂಜುನಾಥ್ ಅವರು ಸಿಬಂದಿಯ ಜೊತೆ ಕಾವೂರು ಠಾಣಾ ವ್ಯಾಪ್ತಿಯ ಮರಕಡ ಜಂಕ್ಷನ್ ಬಳಿ ಕರ್ತವ್ಯದಲ್ಲಿದ್ದರು. ಈ ವೇಳೆ ಬಜಪೆ ಕಡೆಯಿಂದ ಕಾವೂರು ಕಡೆಗೆ ಬೈಕಿನಲ್ಲಿ ಹೆಲ್ಮೆಟ್ ಧರಿಸದೆ ಬರುತ್ತಿದ್ದ ಬೈಕನ್ನು ನಿಲ್ಲಿಸುವಂತೆ ಸೂಚನೆ ನೀಡಿದಾಗ ಸವಾರನ್ನು ಬೈಕನ್ನು ಏಕಾಎಕಿ ಚೆಲುವರಾಜರಿಗೆ ಡಿಕ್ಕಿ ಹೊಡೆದ ಪರಾರಿಯಾಗಿದ್ದ. ಇದರಿಂದ ಪೋಲಿಸ್ ಸಿಬಂದಿ ಚೆಲುವರಾಜ್ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅದರಂತೆ ಬುಧವಾರ ಸಿಸಿಬಿ ಪೋಲಿಸರು ಆರೋಪಿಯನ್ನು ಬಾವುಟ ಗುಡ್ಡೆ ರಸ್ತೆಯಲ್ಲಿ ಬಂಧಿಸಿ ಮುಂದಿನ ಕ್ರಮಕ್ಕಾಗಿ ಕಾವೂರು ಪೋಲಿಸರಿಗೆ ಹಸ್ತಾಂತರಿಸಿದ್ದಾರೆ.

ಬಂಧಿತನ ವಿರುದ್ದ ಈ ಹಿಂದೆ ಮಂಗಳೂರು ದಕ್ಷಿಣ, ಸುರತ್ಕಲ್, ಬಜ್ಪೆ, ಉಳ್ಳಾಲ ಪೋಲಿಸ್ ಠಾಣೆಗಳಲ್ಲಿ ಸರಕಳ್ಳತನ ಹಾಗೂ ಬೈಕ್ ಕಳ್ಳತನ ಸಂಬಂಧಪಟ್ಟಂತೆ ಒಟ್ಟು 10 ಪ್ರಕರಣಗಳು ದಾಖಲಾಗಿರುತ್ತದೆ. ಅಲ್ಲದೇ  2015 ನೇ ಇಸವಿಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಕಾರಾಗೃಹದಲ್ಲಿ ಗಣೇಶ್ ಶೆಟ್ಟಿ  ಎಂಬಾತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದನು. ಈತನು ಈ ಪ್ರಕರಣದಲ್ಲಿ ಸುಮಾರು 3 ತಿಂಗಳ ಹಿಂದೆ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದನು. ಈತನ ವಿರುದ್ಧ ಮಂಗಳೂರು ಬರ್ಕೆ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ಇರುತ್ತದೆ.

ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ  ಹನುಮಂತರಾಯ ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ   ಉಮಾ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ಈ ವಿಶೇಷ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಗಳು  ಆರೋಪಿ ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

 


Spread the love

Exit mobile version