ಸರ್ಕಾರ ಅನುಮತಿ ನೀಡದ ಹೊರತಾಗಿಯೂ ಡಿಕೆಶಿ ಪದಗ್ರಹಣ ಮಾಡಿಯೇ ತೀರುತ್ತೇವೆ: ಸಿದ್ದರಾಮಯ್ಯ
ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಪದಗ್ರಹಣ ಕಾರ್ಯಕ್ರಮಕ್ಕೆ ಬಿಜೆಪಿ ಸರ್ಕಾರ ಮತ್ತೆ ಅನುಮತಿ ನಿರಾಕರಿಸಿದ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿಯ ನೂತನ ಅಧ್ಯಕ್ಷರಾದ @DKShivakumar ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸುತ್ತೇನೆ. ಇದು ರಾಜಕೀಯ ಪ್ರೇರಿತ ನಿರ್ಧಾರವಾಗಿದ್ದು, ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. 1/3#ಬಿಜೆಪಿ_ದುರಾಡಳಿತ
— Siddaramaiah (@siddaramaiah) June 9, 2020
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದು, ಗೃಹ ಸಚಿವ ಅಮಿತ್ ಶಾಗಿಲ್ಲದ ನಿಯಮಗಳನ್ನು ಡಿಕೆ ಶಿವಕುಮಾರ್ ಅವರ ಮೇಲೆ ಹೇರುತ್ತಿದೆ ಎಂದು ಕಿಡಿಕಾರಿದ್ದಾರೆ.
ದೇಶದ ಗೃಹ ಸಚಿವರಾದ @AmitShah ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮಾತ್ರ ಅನ್ವಯ ಆಗುವುದು ಹೇಗೆ? 2/3#ಬಿಜೆಪಿ_ದುರಾಡಳಿತ
— Siddaramaiah (@siddaramaiah) June 9, 2020
ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕು. ಬಿಜೆಪಿಯವರು ಎಂತಹಾ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರು, ಕಾನೂನಿನ ಅಡಿಯಲ್ಲೇ ಕಾರ್ಯಕ್ರಮ ಮಾಡಲಿದ್ದೇವೆ. 3/3#ಬಿಜೆಪಿ_ದುರಾಡಳಿತ
— Siddaramaiah (@siddaramaiah) June 9, 2020
‘ಕೆಪಿಸಿಸಿಯ ನೂತನ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸುತ್ತೇನೆ. ಇದು ರಾಜಕೀಯ ಪ್ರೇರಿತ ನಿರ್ಧಾರವಾಗಿದ್ದು, ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಮಾತ್ರ ಅನ್ವಯ ಆಗುವುದು ಹೇಗೆ? ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕು. ಬಿಜೆಪಿಯವರು ಎಂತಹಾ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರು, ಕಾನೂನಿನ ಅಡಿಯಲ್ಲೇ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.