Home Mangalorean News Kannada News ಸವಾಲುಗಳನ್ನು ಎದುರಿಸಿದಾಗ ಮಾತ್ರ ಪ್ರಗತಿಶೀಲ ನಾಯಕನಾಗಲು ಸಾಧ್ಯ – ವಂ|ಡೆನಿಸ್ ಡೆಸಾ

ಸವಾಲುಗಳನ್ನು ಎದುರಿಸಿದಾಗ ಮಾತ್ರ ಪ್ರಗತಿಶೀಲ ನಾಯಕನಾಗಲು ಸಾಧ್ಯ – ವಂ|ಡೆನಿಸ್ ಡೆಸಾ

Spread the love

ಸವಾಲುಗಳನ್ನು ಎದುರಿಸಿದಾಗ ಮಾತ್ರ ಪ್ರಗತಿಶೀಲ ನಾಯಕನಾಗಲು ಸಾಧ್ಯ – ವಂ|ಡೆನಿಸ್ ಡೆಸಾ

ಉಡುಪಿ: ನಾಯಕನಾದವನು ಸವಾಲುಗಳನ್ನು ಎದುರಿಸಿದಾಗ ಮಾತ್ರ ಪ್ರಗತಿಶೀಲನಾಗಿ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಹೇಳಿದರು.

ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2023-24ನೇ ಸಾಲಿನ ವಾರ್ಷಿಕ ಮಹಾ ಸಭೆ ಹಾಗೂ ಸಹಮಿಲನವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಸ್ಪರ್ಧಾರ್ತಕ ಜಗತ್ತಿನಲ್ಲಿ ನಾಯಕನ ಆಲೋಚನೆಗಳು ಸಮಾಜದಲ್ಲಿ ಬದಲಾವಣೆಯನ್ನು ಬಯಸುವಂತದ್ದಾಗಿರಬೇಕಾಗಿದ್ದು ಹೊಸ ಹೊಸ ಪ್ರಯೋಗಗಳು ಮತ್ತು ಆಲೋಚನೆಗಳೊಂದಿಗೆ ಸಂಘಟನೆಯನ್ನು ಮುನ್ನಡೆಸಬೇಕಾಗಿದೆ ಈ ವೇಳೆ ಬರುವ ಟೀಕೆಗಳನ್ನು ಧನಾತ್ಮಕವಾಗಿ ಸ್ವೀಕರಿಸಿದಾಗ ಉತ್ತಮ ನಾಯಕತ್ವ ಬೆಳೆಯಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅರಣ್ಯ ಸಂರಕ್ಷಾಣಾಧಿಕಾರಿ ಕ್ಲಿಫರ್ಡ್ ಲೋಬೊ ಮಾತನಾಡಿ ಕ್ರೈಸ್ತ ಸಮುದಾಯ ಸೇವೆಯನ್ನು ಪ್ರಥಮಸ್ಥಾನದಲ್ಲಿದ್ದು ಕೇವಲ ಸೇವೆ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಯುವಕರು ಸರಕಾರಿ ಸೇವೆಗಳತ್ತ ಗಮನ ಹರಿಸಬೇಕು ಎಂಬ ಸಲಹೆ ನೀಡಿದರು.
ಸಭೆಯಲ್ಲಿ 2023-24 ನೇ ಸಾಲಿನ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಓಲಿವಿಯಾ ಡಿಮೆಲ್ಲೊ ಮಂಡಿಸಿದರೆ, 2023-24 ನೇ ಸಾಲಿನ ಲೆಕ್ಕಪತ್ರವನ್ನು ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಮಂಡಿಸಿದರು. ಮಾನಸ ಸಂಸ್ಥೆಯ ವರದಿಯನ್ನು ಅಧ್ಯಕ್ಷ ಹೆನ್ರಿ ಮಿನೇಜಸ್, ಸಶಕ್ತ ಸಮುದಾಯ ಸೇವಾ ಟ್ರಸ್ಟಿನ ವರದಿಯನ್ನು ಕಾರ್ಯದರ್ಶಿ ಆಲಿಸ್ ರೊಡ್ರಿಗಸ್ ಮಂಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷರಾದ ಜಾನ್ ಡಿಸಿಲ್ವಾ, ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನಿಕಟಪೂರ್ವ ಅಧ್ಯಕ್ಷರಾದ ಮೇರಿ ಡಿಸೋಜಾ, ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ, ಉಪಾಧ್ಯಕ್ಷರಾದ ಸೊಲೊಮನ್ ಆಲ್ವಾರಿಸ್, ಸಹಕಾರ್ಯದರ್ಶಿ ಲೂಯಿಸ್ ಡಿಸೋಜಾ, ಲೆಸ್ಲಿ ಕರ್ನೆಲಿಯೋ, ವಲಯ ಅಧ್ಯಕ್ಷರಾದ ರೋಸಿ ಕ್ವಾಡ್ರಸ್, ಜುಲಿಯೆಟ್ ಡಿಸೋಜಾ, ವಿಲ್ಸನ್ ಡಿ ಆಲ್ಮೇಡಾ, ವಿಲ್ಸನ್ ಮಸ್ಕರೇನಸ್, ಶಾಂತಿ ಪಿರೇರಾ ಉಪಸ್ಥಿತರಿದ್ದರು.

ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ ಸ್ವಾಗತಿಸಿ, ಕಾರ್ಯದರ್ಶಿ ಓಲಿವಿಯಾ ಡಿಮೆಲ್ಲೊ ವಂದಿಸಿದರು. ಹರ್ಷಿತ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.


Spread the love

Exit mobile version