Home Mangalorean News Kannada News ಸಹಕಾರಿ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ಮನ್ನಾ – ಸಿದ್ದರಾಮಯ್ಯ ಘೋಷಣೆ

ಸಹಕಾರಿ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ಮನ್ನಾ – ಸಿದ್ದರಾಮಯ್ಯ ಘೋಷಣೆ

Spread the love

ಸಹಕಾರಿ ಬ್ಯಾಂಕುಗಳ ಸಾಲದ ಮೇಲಿನ ಬಡ್ಡಿ ಮನ್ನಾ – ಸಿದ್ದರಾಮಯ್ಯ ಘೋಷಣೆ

ಬೆಳಗಾವಿ: ಸಹಕಾರಿ ಬ್ಯಾಂಕ್ಗಳ ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಘೋಷಣೆಗಳನ್ನು ಮಾಡಿದರು. ಅದರಲ್ಲಿ ಬಡ್ಡಿ ಮನ್ನಾ ಸಹ ಒಂದು. ಹಾಗಾದ್ರೆ ಅಧಿವೇಶನದ ಕೊನೆ ದಿನವಾದ ಇಂದು ಸಿಎಂ ಏನೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

  • ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆ.
  • ಸಹಕಾರ ಬ್ಯಾಂಕ್ ಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ.
  • ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು.
  • ಧಾರವಾಡ ಸಮೀಪ ಸುಮಾರು 3000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆ.
  • ರಾಯಚೂರಿನಲ್ಲಿ ಹತ್ತಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಒತ್ತು.
  • ವಿಜಯಪುರದಲ್ಲಿ ಉತ್ಪಾದನಾ ಕ್ಲಸ್ಟರ್ ಅಂದಾಜು 1500 ಎಕರೆ ಪ್ರದೇಶದಲ್ಲಿ ಸ್ಥಾಪನೆ.
  • ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಿ ಉದ್ಯೋಗಾವಕಾಶ ಸೃಷ್ಟಿಗೆ ಕ್ರಮ.
  • ಧಾರವಾಡದಲ್ಲಿರುವ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಉನ್ನತೀಕರಣ.

ಇವುಗಳಲ್ಲಿ ಬಡ್ಡಿ ಮನ್ನಾ ಪ್ರಮುಖವಾಗಿದೆ. ಆದ್ರ ಇದಕ್ಕೆ ವಿರೋಧ ಪಕ್ಷದ ನಾಯಕ ಆರ್ ಶೋಕ್ ಟೀಕಿಸಿದ್ದು, ರೈತರು ಅವಧಿಯೊಳಗೆ ಸಾಲ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು/ ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಎಂದು ಆಗ್ರಹಿಸಿದರು.


Spread the love

Exit mobile version