ಸಹದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ಆರೋಪಿ ವಶಕ್ಕೆ
ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತನನ್ನು ಉಪ್ಪಳ ನಿವಾಸಿ ಅಬ್ದುಲ್ ಲತೀಫ್ ಖಾದರ್(32) ಎಂದು ಗುರುತಿಸಲಾಗಿದೆ.
ಆರೋಪಿಯು ನಗರದ ಬಿಲ್ಡಿಂಗ್ ಸಂಸ್ಥೆಯೊಂದರ ಮ್ಯಾನೇಜರ್ ಆಗಿದ್ದು ಅಲ್ಲಿಯೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದೆ.
ಉಳ್ಳಾಲ ಪೋಲಿಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.