ಸಾನಿಧ್ಯ ವಸತಿ ಶಾಲೆಯಲ್ಲಿ ದಸರಾ ಸಂಭ್ರಮ
ಮಂಗಳೂರು: ನಾಡ ಹಬ್ಬ ದಸರಾ ಎಲ್ಲರಿಗೂ ಒಳಿತು ಉಂಟು ಮಾಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಹೇಳಿದರು .
ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ,ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ಹಾಗೂ ಕಾಮಧೇನು ಗೋ ಆಶ್ರಮ ಟ್ರಸ್ಟ್ ವತಿಯಿಂದ ನಗರದ ಶಕ್ತಿ ನಗರದ ಸಾನಿಧ್ಯ ವಸತಿ ಶಾಲೆಯಲ್ಲಿ ಮಂಗಳವಾರ ನಡೆದ ದಸರಾ ಸಂಭ್ರಮ 2019 ಕಾರ್ಯಕ್ರಮವನ್ನು ಬಿ ಎಂ ಲಕ್ಷ್ಮಿ ಪ್ರಸಾದ್ ಉದ್ಘಾಟಿಸಿದರು .ಭಿನ್ನ ಸಾಮರ್ಥ್ಯದ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿ ಯಲ್ಲಿ ಸೇರಿಸುವಲ್ಲಿ ಸಾನಿಧ್ಯ ಸಂಸ್ಥೆ ಕೈಗೊಂಡಿರುವ ಕಾರ್ಯ ಪ್ರಶಂಸನೀಯ ಎಂದು ಹೇಳಿದರು .
ಕಾರ್ಯಕ್ರಮದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ,ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷ ಸ್ವರ್ಣ ಸುಂದರ್ ,ಸಾನಿಧ್ಯ ವಸತಿ ಶಾಲೆಯ ಆಡಳಿತಾಧಿಕಾರಿ ವಸಂತ್ ಶೆಟ್ಟಿ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ವಿಭಾ ಎಸ್ ನಾಯಕ್ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು. ತಬಲಾದಲ್ಲಿ ಹೇಮಂತ್ ಭಾಗವತ್ ಹಾಗೂ ಹಾರ್ಮೋನಿಯಂ ನಲ್ಲಿ ನಿತ್ಯಾನಂದ ಭಟ್ ಸಾಥ್ ನೀಡಿದರು.