Home Mangalorean News Kannada News ಸಾಮಾಜಿಕ ಜಾಲತಾಣದಲ್ಲಿ ಪಕ್ಷದ-ಅಭ್ಯರ್ಥಿ ಪರ ಪ್ರಚಾರ ಮಾಡಿದ್ರೆ ಅದರ ವೆಚ್ಚ ಅಭ್ಯರ್ಥಿ ಖಾತೆಗೆ ; ಡಿಸಿ...

ಸಾಮಾಜಿಕ ಜಾಲತಾಣದಲ್ಲಿ ಪಕ್ಷದ-ಅಭ್ಯರ್ಥಿ ಪರ ಪ್ರಚಾರ ಮಾಡಿದ್ರೆ ಅದರ ವೆಚ್ಚ ಅಭ್ಯರ್ಥಿ ಖಾತೆಗೆ ; ಡಿಸಿ ಪ್ರಿಯಾಂಕಾ

Spread the love

ಸಾಮಾಜಿಕ ಜಾಲತಾಣದಲ್ಲಿ ಪಕ್ಷದ-ಅಭ್ಯರ್ಥಿ ಪರ ಪ್ರಚಾರ ಮಾಡಿದ್ರೆ ಅದರ ವೆಚ್ಚ ಅಭ್ಯರ್ಥಿ ಖಾತೆಗೆ ; ಡಿಸಿ ಪ್ರಿಯಾಂಕಾ

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇಂದಿನಿಂದಲೇ ನೀತಿಸಂಹಿತೆಯು ಜಾರಿಯಾಗಲಿದೆ. ಸಾಮಾಜಿಕ ಜಾಲತಾಣದ ಮೇಲೂ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಪಕ್ಷದ-ಅಭ್ಯರ್ಥಿ ಪರ ಪ್ರಚಾರ ಮಾಡಿದ್ರೆ ಅದನ್ನೂ ಅಭ್ಯರ್ಥಿ ಚುನಾವಣಾ ವೆಚ್ಚಕ್ಕೆ ಸೇರಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದ್ದಾರೆ.

ಅವರು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಅಭ್ಯರ್ಥಿ ವಿರುದ್ಧವೂ ಅಪಪ್ರಚಾರ ಮಾಡುವಂತಿಲ್ಲ,ಹೀಗಾಗಿ ಫೇಸ್‌ಬುಕ್, ವಾಟ್ಸಾಪ್ ಮುಂತಾದ ಸಾಮಾಜಿಕ ಜಾಲತಾಣಗಳ ಮೇಲೂ ವಿಶೇಷ ನಿಗಾ ಇಡಲು ತಂಡ ರಚನೆ ಮಾಡಲಾಗುವುದು ಎಂದು ಹೇಳರು ಇನ್ನು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಬೂತ್ ರಚನೆ ಮಾಡಲಾಗುವುದು, ಆ ಬೂತ್‌ಗೆ ಮಹಿಳಾ ಸಿಬ್ಬಂಧಿಗಳನ್ನು ನೇಮಿಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ವಿಕಲಚೇತನರು, ಗರ್ಭಿಣಿಯರು ಮತ್ತು ರೋಗಿಗಳಿಗೆ ಮತದಾನ ಮಾಡಲು ವಿಶೇಷ ಸೌಲಭ್ಯ ಕಲ್ಪಿಸಲಾಗಿದ್ದು,ಅವರಿಗೆ ಪ್ರತ್ಯೇಕ ಪಾಸ್ ನೀಡಲಾಗುವುದು , ಮತಗಟ್ಟೆಯಲ್ಲಿ ಅವರಿಗೆ ಆದ್ಯತೆಯ ಮೇಲೆ ಮತ ಚಲಾಯಿಸಲು ಅವಕಾಶ ನೀಡಲಾಗುವುದು,ಅಗತ್ಯವಿರುವೆಡೆಗಳಲ್ಲಿ ವೀಲ್ ಚೇರ್ ಮತ್ತು ರ್ಯಾಂಪ್ ಸೌಲಭ್ಯ ಒದಗಿಸಲು ಈಗಾಗಲೇ ಕ್ರಮ ಕೈಗೊಂಡಿದ್ದು, 8054 ಮಂದಿ ವಿಕಲಚೇತನ ಮತದಾರರನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ವಿವಿ ಪ್ಯಾಟ್ ಯಂತ್ರ ಅಳವಡಿಸಲಾಗಿದ್ದು, ಇದರಿಂದ ತಾವು
ಯಾರಿಗೆ ಮತದಾನ ಮಾಡಿದ್ದೇವೆ ಎಂಬ ಖಾತರಿ ಪ್ರತಿಯೊಬ್ಬ ಮತದಾರರಿಗೆ ಸಿಗಲಿದೆ, ವಿವಿ ಪ್ಯಾಟ್ ಮತಯಂತ್ರಗಳ ಪ್ರಾತ್ಯಕ್ಷಿಕೆ ಸಾರ್ವಜನಿಕರಿಗೆ ನೀಡಲು ಕ್ರಮ ಕೈಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಕೋರಿಕೆ ಮೇರೆಗೆ , ಅವರಿಗೆ ಅನುಕೂಲವಾದ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿ ಪ್ರಾತ್ಯಕ್ಷಿಕೆ ನೀಡಲಾಗುವುದು ಎಂದು ಡಿಸಿ ಹೇಳಿದರು.

ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಮಹಿಳಾ ಮತಗಟ್ಟೆ ಸ್ಥಾಪಿಸಲು ಚುನಾವಣಾ ಆಯೋಗ ಸೂಚಿಸಿದ್ದು, ಈ ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುವ ಎಲ್ಲಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಸಹಾ ಮಹಿಳೆಯರೇ ಆಗಿರುತ್ತಾರೆ ಎಂದು ಡಿಸಿ ತಿಳಿಸಿದರು.

ಚುನಾವಣಾ ಮಾದರಿ ನೀತಿ ಸಂಹಿತೆಯಂತೆ, ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿನ ಕಟೌಟ್ ಗಳು , ಬ್ಯಾನರ್ ಗಳನ್ನು, ಸರ್ಕಾರಿ ಕಾರ್ಯಕ್ರಮಗಳ ಜಾಹೀರಾತು ಬೋರ್ಡ್ಗಳನ್ನು 24ಗಂಟೆಗಳ ಒಳಗೆ ತೆರವುಗೊಳಿಸಬೇಕು, ಯಾವುದೇ ಚುನಾವಣಾ ಪ್ರಚಾರಕ್ಕೆ ಸಂಬಂದಿಸಿದಂತೆ ಸಭೆ ಸಮಾರಂಬಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ, ಪೊಲೀಸ್ ಇಲಾಖೆಯಿಂದ ಮೈಕ್ ಅನುಮತಿ ಪಡೆಯಬೆಕು, ಪ್ರಚಾರದ ಸಮಯದ ಬೆಳಗ್ಗೆ 6 ರಿಂದ ರಾತ್ರಿ 10 ರ ವರೆಗೆ ಮಾತ್ರ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಖಾಸಗಿ ಜಾಗದಲ್ಲಿ ಗೋಡೆಗಳ ಮೇಲೆ ಯಾವುದೇ ಪಕ್ಷದ ಪರ ಪ್ರಚಾರ ಮಾಡುವಂತಹ ಗೋಡೆ ಬರಹಗಳಿದ್ದಲ್ಲಿ ಅದನ್ನೂ ಕೂಡ 24 ಗಂಟೆಗಳ ಒಳಗೆ ತೆರವು ಮಾಡಬೇಕು ಎಂದರು.


Spread the love

Exit mobile version