ಗ್ರಾಮೀಣ ಪ್ರದೇಶದಲ್ಲಿ ಅರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಪ್ರಾರಂಭವಾದ ಸಂತ ಅಂತೋನಿ ಆಂಗ್ಲ ಮಾಧ್ಯಮ ಶಾಲೆ ಸಾಸ್ತಾನ ಇದರ ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಿದ್ದು ಮೊದಲ ಪ್ರಯತ್ನದಲ್ಲಿಯೇ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡುವುದರೊಂದಿಗೆ ಶಾಲೆಯು ಉತ್ತಮ ಶೇ 93 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ 26 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು, ಮೂರು ವಿದ್ಯಾರ್ಥಿಗಳಾದ ಶರಲ್, ಆಲನ್ ಮತ್ತು ಲಿಶಾ ಎ+ ಫಲಿತಾಂಶ ಪಡೆದಿದ್ದು, ನಾಲ್ಕು ವಿದ್ಯಾರ್ಥಿಗಳು ಎ, ಮೂರು ವಿದ್ಯಾರ್ಥಿಗಳು ಬಿ+ ಹಾಗೂ ಇತರ ವಿದ್ಯಾರ್ಥಿಗಳು ಬಿ ಹಾಗೂ ಸಿ ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಸಂಚಾಲಕ ವಂದನೀಯ ಜೋನ್ ವಾಲ್ಟರ್ ಮೆಂಡೊನ್ಸಾ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಗೊನ್ಸಾಲ್ವಿಸ್ ಅಭಿನಂದನೆ ಸಲ್ಲಿಸಿದ್ದಾರೆ.