ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರ ; ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Spread the love

ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ವಿಚಾರ ; ಸೆ.2ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸೋಮವಾರ(ಸೆ.2) ಮಧ್ಯಾಹ್ನ 2:30ಕ್ಕೆ ವಿಚಾರಣೆ ಮುಂದೂಡಿದೆ‌.

ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಸರ್ಕಾರ, ಮಧ್ಯಂತರ ಅರ್ಜಿದಾರರಿಗೆ ವಾದ ಮಂಡಿಸಲು ಕಾಲಾವಕಾಶ ನೀಡಿದೆ. ರಾಜ್ಯಪಾಲರು, ಖಾಸಗಿ ದೂರುದಾರರ ಪರ ವಕೀಲರ ವಾದ ಮುಕ್ತಾಯ ಆಗಿದೆ.


Spread the love