ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆ ಅಸಂವಿಧಾನಿಕ
- ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರವಿರಾಜ್ ರಾವ್ ಆಕ್ರೋಶ
ಉಡುಪಿ: ‘ಮುಡಾ’ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರವಿರಾಜ್ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಯಶಸ್ವಿ ನಾಯಕರಾಗಿರುವ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ರಾಜ್ಯಪಾಲರ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಅದೊಂದು ಷಡ್ಯಂತ್ರವಾಗಿದೆ. ರಾಜ್ಯ ಕಂಡ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಹಾಗೂ ದೇಶದ ಶ್ರೇಷ್ಠ ಅಹಿಂದ ನೇತಾರ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿ ನೀಡುವ ಮಟ್ಟಕ್ಕೆ ಇಳಿದಿದ್ದು ನಿಜಕ್ಕೂ ಅಸಂವಿಧಾನಕ ನಡೆಯಾಗಿದೆ.
40 ವರ್ಷಗಳರಾಜಕೀಯ ಬದುಕಿನಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಬದುಕಿನ ಧೀಮಂತ ನಾಯಕ ಸಿದ್ದರಾಮಯ್ಯ. ಅವರ ಯಶಸ್ಸು ಸಹಿಸದ ಕೇಂದ್ರದ ಬಿಜೆಪಿ ಸರ್ಕಾರ ನೀಚತನಕ್ಕೆ ಇಳಿದಿರುವುದು ಖಂಡನೀಯ. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗಿಲ್ಲ. ಅದಕ್ಕಾಗಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಕುಟುಂಬದವರನ್ನು ಅಕ್ಕಪಕ್ಕ ಸೇರಿಸದೆ ಆಡಳಿತ ಮಾಡಿದ್ದಾರೆ. ಬಿಜೆಪಿಯವರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಆಗದೇ ಇರೋ ವಿಚಾರವನ್ನು ಅವರ ಹಣೆಗೆ ಕಟ್ಟುವ ಕೆಲಸ ನಡೆಯುತ್ತಿದೆ. ಇಂತಹ ಷಡ್ಯಂತ್ರವನ್ನು ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಿ ಬಿಜೆಪಿಗೆ ಸೂಕ್ತ ಉತ್ತರ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.