ಸಿದ್ದರಾಮಯ್ಯ ಸರಕಾರದಿಂದ ಮಂಗಳೂರಿಗೆ ಗರಿಷ್ಠ ಅನುದಾನ: ಸಚಿವ ರೈ
ಮಂಗಳೂರು: 2018 ರ ಇಸವಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಿದ್ದತೆಗಾಗಿ ದಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಕಾಂಗ್ರೆಸ್ ಸದಸ್ಯರ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ ರೈ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಗಳೂರಿಗೆ ಗರಿಷ್ಠ ಅನುದಾನ ನೀಡಿದೆ. ಅಭಿವೃದ್ಧಿಯೇ ನಮ್ಮ ಏಕೈಕ ಉದ್ದೇಶವಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ವ್ಯಾಪ್ತಿಯ ಉಭಯ ಶಾಸಕರಾದ ಜೆ ಆರ್ ಲೋಬೊ ಮತ್ತು ಮೊಯ್ದಿನ್ ಬಾವರವರ ಸಲಹೆಯನ್ನು ಪಡೆದುಕೊಂಡು ಕೆಲಸ ಮಾಡಬೇಕೆಂದು ಸೂಚಿಸಿದ ಅವರು ಮಂಗಳೂರು ನಗರವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಶೀಲನೆ ಮಾಡಿ ಯಾವುದೇ ಕಾರಣಕ್ಕೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಕಾರ್ಯಕರ್ತುರು ಹಗಲು ರಾತ್ರಿಯೆನ್ನದೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಶಾಸಕರಾದ ಜೆ ಆರ್ ಲೋಬೊ, ಮೊಯ್ದಿನ್ ಬಾವ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಹಾಜಿ ಇಬ್ರಾಹಿಂ ಕೋಡಿಜಾಲ್ ಹಾಗೂ ಮಾಜಿ ಮೇಯರುಗಳು ಸಲಹೆ ನೀಡಿದರು.
ಸಭೆಯಲ್ಲಿ ಮೇಯರ್ ಕವಿತಾ ಸನಿಲ್, ಉಪಮೇಯರ್ ರಜನೀಶ್, ಮನಾಪ ಮುಖ್ಯ ಸಚೇತಕ ಶಶಿಧರ್ ಹೆಗ್ಡೆ, ಮಾಜಿ ಮೇಯರ್ ಹರಿನಾಥ್, ಜೆಸಿಂತಾ ಆಲ್ಫ್ರೇಡ್, ಮಹಾಬಲ ಮಾರ್ಲ, ಅಬ್ದುಲ್ ಅಝೀಝ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಅಬ್ದುಲ್ ರವೂಫ್, ನಾಗವೇಣಿ, ಸಬಿತಾ ಮಿಸ್ಕಿತ್, ಪ್ರತಿಭಾ ಕುಳಾಯಿ ಹಾಗೂ ಮಂಗಳೂರು ಮಹಾನಗರಪಾಲಿಕೆಯ ಕಾಂಗ್ರೆಸ್ ಸದಸ್ಯರು, ಬ್ಲಾಕ್ ಅಧ್ಯಕ್ಷರುಗಳಾದ ವಿಶ್ವಾಸ್ ಕುಮಾರ್ ದಾಸ್, ಬಾಲಕೃಷ್ಣ ಶೆಟ್ಟಿ ಪುರುಷೋತ್ತಮ ಚಿತ್ರಾಪುರ ಮತ್ತು ಸದಾಶಿವ ಉಳ್ಳಾಲ, ಸಂತೋಶ್ ಕುಮಾರ್ ಶೆಟ್ಟಿ, ನಝೀರ್ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.