ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಕೋಕೆನ್ ಹೊಂದಿದ 5 ಮಂದಿಯ ಸೆರೆ
ಮಂಗಳೂರು: ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಕೋಕೆನ್ ನ್ನು ಅಕ್ರಮವಾಗಿ ಹೊಂದಿಕೊಂಡು 4-5 ಮಂದಿ ವ್ಯಕ್ತಿಗಳು ತಮ್ಮ ಕಾರುಗಳಲ್ಲಿ ಯುವಕರಿಗೆ ಮಾರಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೋಕೆನ್ ನ್ನು ಹೊಂದಿದ
ಬಂಧಿತರನ್ನು ಕಾಸರಗೋಡು ಮಂಜೇಶ್ವರ ನಿವಾಸಿ ವಿಜೇಶ್ ಕುಮಾರ್(34), ಪುತ್ತೂರು ನಿವಾಸಿ ನಿತಿನ್ (35), ಬಿಜೈ ನಿವಾಸಿ ಸಂತೋಷ್ ಕುಮಾರ್ (36), ಬೊಂದೇಲ್ ನಿವಾಸಿ ಸಂದೀಪ್ ಕುಮಾರ್ (34), ಬಿಕರ್ನಕಟ್ಟೆ ರಾಹುಲ್ (26) ಎಂದು ಗುರುತಿಸಲಾಗಿದೆ.
ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ ರೂ. 50,000/- ಮೌಲ್ಯದ ಮಾದಕ ವಸ್ತುವಾದ ಕೋಕೆನ್ ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಆರೋಪಿಗಳು ಗೋವಾದಿಂದ ಈ ಮಾದಕ ವಸ್ತುಗಳನ್ನು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ, ಹೊಂಡಾ ಜಾಝ್, ಹುಂಡೈ ಐ20, ಮಾರುತಿ ಝೆನ್, 7 ಮೊಬೈಲ್ ಫೋನ್ ಹಾಗೂ ನಗದು ಹಣ ರೂ. 1,02,000/- ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 19,57,000/- ಆಗಿರುತ್ತದೆ. ಆರೋಪಿಗಳು ಮಂಗಳೂರು ನಗರದಲ್ಲಿ ಹಲವು ವ್ಯಕ್ತಿಗಳಿಗೆ ಈ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಿರುವ ಬಗ್ಗೆ ತಿಳಿದುಬಂದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುವುದು.
ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮಾರುತಿ ನಾಯಕ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಸಿಬ್ಬಂದಿಗಳು ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.