ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ ಓರ್ವನ ಸೆರೆ

Spread the love

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಹೊಂದಿದ ಓರ್ವನ ಸೆರೆ

ಮಂಗಳೂರು:  ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿರುತ್ತಾರೆ.

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (Methylene dioxy methamphetamine) MDMA ನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಹೊಂದಿದ   ಮಹಮ್ಮದ್ ಶಫಿಕ್ @ ಚಪ್ಪಿ ಪ್ರಾ  ಆಜಾದ್ ಕ್ರಿಕೆಟ್ ಕ್ಲಬ್ ನ ಬಳಿ ಚೊಕ್ಕಬೆಟ್ಟು ಸುರತ್ಕಲ್ ಮಂಗಳೂರು, ಎಂಬಾತನನ್ನು ವಶಕ್ಕೆ ಪಡೆದುಕೊಂಡು ಅವರಿಂದ 60 ಗ್ರಾಂ ತೂಕದ ರೂ. 1,80,000/- ಮೌಲ್ಯದ ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ. ಆರೋಪಿಯು ಮುಂಬೈಯಿಂದ ಈ ಮಾದಕ ವಸ್ತುವನ್ನು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು. ಆರೋಪಿಯಿಂದ ಮೊಬೈಲ್ ಫೋನ್-1 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 1,83,000/-ಆಗಿರುತ್ತದೆ. ಈ ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು,ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುವುದು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

CCB ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.


Spread the love