ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಕೋಕೆನ್ ಹೊಂದಿದ ಆರೋಪಿಯ ಸೆರೆ
ಮಂಗಳೂರು: ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ & ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿರುತ್ತಾರೆ.
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಕೋಕೆನ್ ನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕೊಕೆನ್ ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಬೋಳೂರು ಸುಲ್ತಾನ್ ಬತ್ತೇರಿ ನಿವಾಸಿ ಮೋನಿಸ್(36) ಎಂಬಾತನನ್ನು ಮಂಗಳೂರು ನಗರದ ಸುಲ್ತಾನ್ ಭತ್ತೇರಿ ಬಳಿಯಿಂದ ವಶಕ್ಕೆ ಪಡೆದುಕೊಂಡು ಆತನಿಂದ 16 ಗ್ರಾಂ ತೂಕದ ರೂ. 1,60,000/- ಮೌಲ್ಯದ ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಕೋಕೆನ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಯು ಮುಂಬೈಯಿಂದ ಈ ಮಾದಕ ವಸ್ತುವನ್ನು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು. ಆರೋಪಿಯಿಂ;ದ ಮೊಬೈಲ್ ಫೋನ್-2 ನ್ನು, ಡಿಜಿಟಲ್ ತೂಕದ ಸ್ಕೇಲ್, ಹಾಗೂ ಒಂದು ಹೊಂಡಾ ಅಕ್ಟಿವಾ ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 2,81,500/-ಆಗಿರುತ್ತದೆ. ಈ ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುವುದು. ಈ ಬಗ್ಗೆ ಇಕನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್ ಐ.ಪಿ.ಎಸ್, ಪೊಲೀಸ್ ಉಪ ಆಯುಕ್ತರವರಾದ ಹನುಮಂತರಾಯ, (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಲಕ್ಷ್ಮಿ ಗಣೇಶ್, (ಅಪರಾಧ & ಸಂಚಾರ), ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್ ನಾಯ್ಕ್ ಇಕಾನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಮಕೃಷ್ಣ ಸಿಸಿಬಿ ಪಿಎಸ್ಐ ಯವರಾದ ಕಬ್ಬಾಳ್ ರಾಜ್, ಶಂಕರಿ ನಾಯರಿ ಹಾಗೂ ಸಿಬ್ಬಂದಿಗಳು ಮತ್ತು ಇಕಾನಾಮಿಕ್ & ನಾರ್ಕೋಟಿಕ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.