ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 4 ವಾರಂಟ್ ಅಸಾಮಿಗಳ ಸೆರೆ

Spread the love

ಸಿಸಿಬಿ ಕಾರ್ಯಾಚರಣೆ: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ 4 ವಾರಂಟ್ ಅಸಾಮಿಗಳ ಸೆರೆ
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ನಾಲ್ಕು ಮಂದಿ ವಾರಂಟ್ ಆಸಾಮಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಪಣಂಬೂರು, ಕೊಣಾಜೆ  ಹಾಗೂ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.
1. ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ದನ ಕಳ್ಳತನ ಪ್ರಕರಣ ಹಾಗೂ ಬರ್ಕೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಮುನಾವರ್ ಮುಸ್ತಾಕ್ @ ಮುನ್ನ, 40), ವಾಸ: ಶ್ರೀನಿವಾಸ ಕಾಲೇಜ್ ಹತ್ತಿರ, ವಳಚ್ಚಿಲ್, ಫರಂಗಿಪೇಟೆ, ಮಂಗಳೂರು. ಹಾಲಿ ವಾಸ: ನಡುಪಳ್ಳಿ ಮಸೀದಿ ಬಳಿ, ಕುದ್ರೋಳಿ, ಮಂಗಳೂರು  ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
2. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕಳವು, ಕೊಲೆಯತ್ನ, ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 9 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮೊಹಮ್ಮದ್ ರಫೀಜ್@ ಹಫೀಜ್@ ಅಫ್ರಿದ್, ಪ್ರಾಯ: 23 ವರ್ಷ, ತಂದೆ: ದಿ.ರಫೀಕ್, ವಾಸ: ಕೆಂಪುಗುಡ್ಡೆ ಹೌಸ್, ಸಲಾಫಿ ಮಸೀದಿ ಹತ್ತಿರ, ಅಡ್ಯಾರ್, ಕಣ್ಣೂರು, ಮಂಗಳೂರು ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಈತನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ, ಕಂಕನಾಡಿ ನಗರ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ಕೊಲೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.
3. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ಕೊಲೆ ಯತ್ನ, ಕೊಲೆ, ವಂಚನೆ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟ ಒಟ್ಟು 6 ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಮಹಮ್ಮದ್ ನೌಫಾಲ್ @ ಕಿಡ್ನಿ ನೌಫಾಲ್, ಪ್ರಾಯ: 32 ವರ್ಷ ತಂದೆ: ಅಬ್ದುಲ್ ಲತೀಪ್ ವಾಸ; ಶಾಂತಿಭಾಗ್, ನಿಯರ್ ಯೆನಪೋಯ ಆಸ್ಪತ್ರೆ, ಕೋಟೆಕಾರ್ ಗ್ರಾಮ  ಉಳ್ಳಾಲ ತಾಲೂಕು ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
4. ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ನೌಷಾದ್ @ ಬುಲೆಟ್ ನೌಷಾದ್ ಪ್ರಾಯ:  ತಂದೆ ಆದಂ, ವಾಸ: ಬಾಬಿರಿ ಮಂಜಿಲ್, ನಿಯರ್ ಬದ್ರಿಯಾ ಮಸೀದಿ ಕಸಬಾ ಬೆಂಗರೆ, ತನ್ನೀರ್ ಬಾವಿ,  ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಮೇಲ್ಕಂಡ ಆರೋಪಿ ಪತ್ತೆ ಕಾರ್ಯವನ್ನು  ಮಂಗಳೂರು ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್, ಐ ಪಿ ಎಸ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಎಸಿಪಿ ಶ್ರೀ ಮನೋಜ್ ಕುಮಾರ್ ನಾಯ್ಕ್, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಹಾಗೂ ಸಿಸಿಬಿ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.

Spread the love
Subscribe
Notify of

0 Comments
Inline Feedbacks
View all comments