Home Mangalorean News Kannada News ಸಿಸಿಬಿ ಪೊಲೀಸರಿಂದ ಅಕ್ರಮ ಗಾಂಜಾ ಪತ್ತೆ ಆರೋಪಿಯ ಸೆರೆ

ಸಿಸಿಬಿ ಪೊಲೀಸರಿಂದ ಅಕ್ರಮ ಗಾಂಜಾ ಪತ್ತೆ ಆರೋಪಿಯ ಸೆರೆ

Spread the love

ಸಿಸಿಬಿ ಪೊಲೀಸರಿಂದ ಅಕ್ರಮ ಗಾಂಜಾ ಪತ್ತೆ ಆರೋಪಿಯ ಸೆರೆ

ಮಂಗಳೂರು: ಮಂಗಳೂರು ನಗರಕ್ಕೆ ಕೇರಳ ರಾಜ್ಯದಿಂದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದವನನ್ನು ಗಾಂಜಾ ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತನನ್ನು ಮಂಗಳೂರು ಗುರುಪುರ ಕೊಟ್ಟಾರಿಗುಡ್ಡೆ ನಿವಾಸಿ ಜಮಾಲ್ (35) ಎಂದು ಗುರುತಿಸಲಾಗಿದೆ.

ಜುಲೈ 20 ರಂದು ಮಂಗಳೂರು ನಗರಕ್ಕೆ ಕಾಸರಗೋಡು ಜಿಲ್ಲೆಯ ಉಪ್ಪಳದಿಂದ ಗಾಂಜಾವನ್ನು ಬಿಳಿ ಬಣ್ಣದ ನೊಂದಾಣೆ ಸಂಖ್ಯೆಯಿರದ ಹೊಂಡಾ ಅಕ್ಟಿವಾ ದ್ವಿಚಕ್ರ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ಗೇಟ್ ಬಳಿಯಿಂದ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಸಮಯದಲ್ಲಿ ಜಮಾಲ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ಒಟ್ಟು 2 ಕೆಜಿ ಗಾಂಜಾ, ನೊಂದಾಣೆ ಸಂಖ್ಯೆಯಿರದ ಹೊಂಡಾ ಅಕ್ಟಿವಾ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ ಹಾಗೂ ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 1,15,000/- ಆಗಿರುತ್ತದೆ. ಈ ಗಾಂಜಾವನ್ನು ಆರೋಪಿಗಳು ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿರುವುದಾಗಿದೆ. ಆರೋಪಿಯು 2000 ನೇ ಇಸವಿಯಲ್ಲಿ ಕೆ ಸಿ ರೋಡಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪುತ್ತುಬಾವ ಕೊಲೆ ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದನು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ ಹನುಮಂತರಾಯ ಮತ್ತು ಎಸಿಪಿ ಸಿಸಿಆರ್ ಬಿ ವೆಲೆಂಟೈನ್ ಡಿ ಸೋಜಾ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.


Spread the love

Exit mobile version