ಸಿಸಿಬಿ ಪೊಲೀಸರ ಕಾರ್ಯಾಚರಣೆ: ಆಟೋ ರಿಕ್ಷಾದಲ್ಲಿ ಎಮ್ ಡಿ ಎಮ್ ಎ ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು: ಜನವರಿ 18 ರಂದು ಮಂಗಳೂರು ನಗರ ಪಳ್ನೀರು ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿರುತ್ತಾರೆ.ಆರೋಪಿತನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದನು. ಆರೋಪಿತನಿಂದ 45 ಸಾವಿರ ರೂ ಮೌಲ್ಯದ 9 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ.
ಬಂಧಿತ ಆರೋಪಿಯನ್ನು ಬಜಾಲ್ ನಿವಾಸಿ ತೌಸೀಫ್ @ತೌಚಿ (23) ಎಂದು ಗುರುತಿಸಲಾಗಿದೆ.
ಬಂಧಿತನಿಂದ ರೂ 45000 ಮೌಲ್ಯದ 9 ಗ್ರಾಂ ಎಮ್ ಡಿ ಎಮ್ ಎ ಮಾದಕ ವಸ್ತು, ರೂ 10000 ಮೌಲ್ಯದ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಹಾಗೂ ರೂ 100000 ಮೌಲ್ಯದ ಆಟೋ ರಿಕ್ಷಾ ವಶಕ್ಕೆ ಪಡೆದಿದ್ದು, ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 1,55,000/- ರೂ ಆಗಬಹುದು.
ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಮಾನ್ಯ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ರವರ ನೇತೃತ್ವದಲ್ಲಿ ಈ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.