Home Mangalorean News Kannada News ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿ ಸೆರೆ

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿ ಸೆರೆ

Spread the love

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿ ಸೆರೆ

ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದ 5 ಮಂದಿಯನ್ನು ದಸ್ತಗಿರಿ ಮಾಡಿ 70 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು ಬಳಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾಸರಗೋಡು ಬೆಂಗ್ರೆ ನಿವಾಸಿ ಅಬ್ದುಲ್ ಶಾಕೀರ್(24), ಮಂಜೇಶ್ವರ ಕುಂಜತ್ತೂರು ನಿವಾಸಿ ಹಸನ್ ಆಶೀರ್(34), ಕಣ್ಣೂರು ಕೊರಂಗಾಡ್ ನಿವಾಸಿ ರಿಯಾಜ್ ಎ.ಕೆ(31), ವರ್ಕಾಡಿ ನಿವಾಸಿ ಮೊಹಮ್ಮದ್ ನೌಷಾದ್(22), ಕುಂಜತ್ತೂರು ನಿವಾಸಿ ಯಾಸೀನ್ ಇಮ್ರಾಜ್ @ ಇಂಬು(35 ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ರೂ. 3,50,000/- ಮೌಲ್ಯದ 70 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ನಗದು ಹಣ ರೂ. 1460/- ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,25,500/- ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಬೆಂಗಳೂರಿನಿಂದ ಹಾಗೂ ಇತರ ಕಡೆಗಳಿಂದ ಎಂಡಿಎಂಎ ನ್ನು ಖರೀದಿಸಿಕೊಂಡು ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ.

ಆರೋಪಿಗಳ ಪೈಕಿ ಹಸನ್ ಅಶಿರ್ ಎಂಬಾತನ ವಿರುದ್ದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ ಪ್ರಕರಣವೊಂದು ದಾಖಲಾಗಿರುತ್ತದೆ. ಇನ್ನೋರ್ವ ಆರೋಪಿ ಯಾಸೀನ್ ಇಮ್ರಾಜ್ ಎಂಬಾತನ ವಿರುದ್ಧ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಪೊಲೀಸ್ ಸ್ಟೇಷನ್ ನಲ್ಲಿ ಹಾಗೂ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಒಟ್ಟು 2 ಪ್ರಕರಣ ದಾಖಲಾಗಿರುತ್ತದೆ.

ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.


Spread the love

Exit mobile version