Home Mangalorean News Kannada News ಸಿ ಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ಪಾಲ್ ಸುವರ್ಣ ಮನವಿ

ಸಿ ಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ಪಾಲ್ ಸುವರ್ಣ ಮನವಿ

Spread the love

ಸಿ ಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ ನಿರ್ಮಾಣವಾಗಿದ್ದು, ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಉಡುಪಿ ಜಿಲ್ಲೆಗೆ ನಿರಂತರ ಸಿ ಎನ್ ಜಿ ಪೂರೈಕೆಗೆ ಕ್ರಮ ವಹಿಸುವಂತೆ ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಸಾವಿರಕ್ಕೂ ಮಿಕ್ಕಿ ಆಟೋಗಳು ಹಾಗೂ ಇತರ ವಾಹನಗಳು ಸಿ ಎನ್ ಜಿ ಇಂದನವನ್ನೇ ಅವಲಂಬಿಸಿದ್ದು, ಇಂಧನ ಕೊರತೆಯಿಂದ ಸಮಸ್ಯೆ ಎದುರಿಸುತ್ತಿದ್ದಾರೆ.

ದಿನೇ ದಿನೇ ಸಿ ಎನ್ ಜಿ ಆಧಾರಿತ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದರೂ, ಸಿ ಎನ್ ಜಿ ತುಂಬುವ ಬಂಕ್ ಗಳ ಕೊರತೆಯಿಂದ ವಾಹನ ಮಾಲೀಕರು, ಆಟೋ ಚಾಲಕರು ಬಾಡಿಗೆ ಬಿಟ್ಟು ಬಂಕ್ ಗಳ ಮುಂದೆ ಕಾಯುವ ಪರಿಸ್ಥಿತಿ ಎದುರಾಗಿದೆ.

ಶೀಘ್ರದಲ್ಲಿಯೇ ಪೆಟ್ರೋಲಿಯಂ ಸಚಿವಾಲಯದ ಸಚಿವರು ಹಾಗೂ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version