ಸುಪ್ರೀಂಕೋರ್ಟ್ ಜೀವಂತವಿದ್ದರೆ ಪೌರತ್ವ ಕಾಯ್ದೆಯನ್ನು ಕಿತ್ತು ಸಮುದ್ರಕ್ಕೆಸೆಯಲಿ- ಪ್ರಮೋದ್ ಮಧ್ವರಾಜ್
ಉಡುಪಿ: ನನ್ನ ಬಳಿ ಎನ್ ಆರ್ ಸಿಯ ಯಾರಾದರೂ ದಾಖಲೆಗಳನ್ನು ಸಾಬೀತುಪಡಿಸಲು ಕೇಳಿದರೆ ನಾನು ಕೊಡಲು ಹೋಗುವುದಿಲ್ಲ ಯಾಕೆಂದರೆ ನಾನು ಭಾರತೀಯ. ಈ ವಿಚಾರದಲ್ಲಿ ಜೈಲಿಗೆ ಹೋಗಲು ಕೂಡ ಸಿದ್ದನಿದ್ದೇನೆ. ಈ ದೇಶದಲ್ಲಿ ಸುಪ್ರೀಂ ಕೋರ್ಟ್ ಜೀವಂತವಿದ್ದರೆ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಸಮುದ್ರಕ್ಕೆ ಎಸೆಯಲಿ. ಸುಪ್ರೀ ಕೋರ್ಟ್ ಜನರಿಗೆ ರಕ್ಷಣೆ ಕೊಡುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕೇಂದ್ರ ಸರಕಾರದ ವಿರುದ್ಧ ಕೆಂಡಕಾರಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಜನವಿರೋಧಿ ದೇಶ ವಿರೋಧಿ ಸಂವಿಧಾನ ವಿರೋಧಿ ಎನ್ ಆರ್ ಸಿ, ಸಿಎಎ ಕಾಯಿದೆ ತರುವ ಮೂಲಕ ಬಿಜೆಪಿ ಭಾರತಕ್ಕೆ ಬೆಂಕಿ ಇಡುತ್ತಿದೆ.
ಭಾರತದಲ್ಲಿ 130 ಕೋಟಿ ಜನರೂ ಸಮಾನರು. ದೇಶದ ಧರ್ಮೀಯರಲ್ಲಿ ಬೇಧ ಭಾವ ಮಾಡಕೂಡದು. ಸಂವಿಧಾನದಲ್ಲಿ ಧಾರ್ಮಿಕ ವಿಭಜನೆಗೆ ಅವಕಾಶವಿಲ್ಲ ಎಂದು ಹೇಳಿದರು.
ಈ ಎರಡು ಕಾಯ್ದೆಯ ಮೂಲಕಬಿಜೆಪಿ ಈ ದೇಶಕ್ಕೆ ಬೆಂಕಿ ಕೊಡುತ್ತಿದೆ. ಜನ ಬೀದಿಗಿಳಿದು ಘರ್ಷಣೆಯಲ್ಲಿ ತೊಡಗಿದ್ದಾರೆ. ಬಿಜೆಪಿ ಸರಕಾರ ಆರ್ಥಿಕವಾಗಿ ಭಾರತವನ್ನು ನಿರ್ಣಾಮ ಮಾಡಿಯಾಗಿದೆ, ಇದೀಗ ಬಾಂಗ್ಲಾದೇಶದ ಅರ್ಧದಷ್ಟು ಜಿಡಿಪಿಗೆ ಭಾರತ ಇಳಿದಿದೆ. ಇಂದಿರಾಗಾಂಧಿ ಕಟ್ಟಿದ ಬಾಂಗ್ಲಾದೇಶ ಸುಭದ್ರ ಆಗಿದೆ. ಭಾರತದ ಆರ್ಥಿಕ ತಳಹದಿಯೇ ಕುಸಿದಿದೆ ಎಂದು ಹೇಳಿದರು.
ಕೇಂದ್ರ ಸರಕಾರ ರಾಜೀನಾಮೆ ಕೊಡುವ ಕಾಲ ಬಂದಿದೆ, ಭಾರತವನ್ನು ಛಿದ್ರ ಛಿದ್ರ ಮಾಡಲು ಮಹಾನ್ ನಾಯಕರು ಎಂದು ಕರೆಸಿಕೊಂಡವರು ಹೊರಟಿದ್ದಾರೆ ಎಂದು ಆಕ್ರೋಷ ವ್ಯಕ್ತಗೊಳಿಸಿದರು.
ಬಿಜೆಪಿಗೆ ಅಧಿಕಾರ ಮಾಡುವ ಹಕ್ಕಿಲ್ಲ, ಸುಪ್ರೀಂ ಕೋರ್ಟ್ ಪೌರತ್ವ ಕಾಯಿದೆಯನ್ನು ಬದಿಗೆ ಹಾಕಬೇಕು- ಬಿಜೆಪಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಡಬೇಕು ಎಂದು ಮಧ್ವರಾಜ್ ಒತ್ತಾಯಿಸಿದರು. ನಾನು ಪ್ರಮೋದ್ ಮಧ್ವರಾಜ್ ಎಂದು ಪ್ರೂವ್ ಮಾಡಬೇಕಂತೆ. ನನ್ನ ದೇಶದಲ್ಲಿ ಇದಕ್ಕಿಂತ ನಾಚಿಕೆಗೇಡಿನ ವಿಷಯ ಮತ್ತೊಂದಿಲ್ಲ ಎಂದರು.