ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಏಟು ಪ್ರಕರಣ; ಪೊಲೀಸ್ ಅಮಾನತು
ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅರ್ಚಕರೋರ್ವರಿಗೆ ಲಾಠಿಯಿಂದ ಹೊಡೆದು ಗಾಯಗೊಳಿಸಿದ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ದಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸುಬ್ರಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿ ಶಂಕರ್ ಸಂಸಿ ಎಂಬವರು ಸ್ಥಳೀಯ ದೇವಸ್ಥಾನವೊಂದರ ಅರ್ಚಕರೊರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸ್ ಉಪವಿಭಾಗಾಧಿಕಾರಿಯಿಂದ ಘಟನೆಯ ಬಗ್ಗೆ ವರದಿ ಪಡೆದು ಪರಿಶೀಲಿಸಿದ್ದು ಮೇಲ್ನೋಟಕ್ಕೆ ಸದರಿ ಸಿಬ್ಬಂದಿಯ ದುರುವರ್ತನೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತ್ತುಗೊಳಿಸಿ ಅದೇಶಿಸಿರುತ್ತಾರೆ ಹಾಗು ಇಲಾಖಾ ವಿಚಾರಣೆ ಮುಂದುವರೆದಿರುತ್ತದೆ ಎಂದು ತಿಳಿಸಿದ್ದಾರೆ.