ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ – ಯುವಕ ಮೃತ್ಯು

Spread the love

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ – ಯುವಕ ಮೃತ್ಯು

ಸುರತ್ಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ.

ಗಣೇಶ್ ಅವರು ಪಣಂಬೂರು ಬಂದರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಗುರುವಾರ ಬೆಳಿಗ್ಗೆ ಕೆಲಕ್ಕೆ ಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಸ್ಲೋ ಮಾಡಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments