ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Spread the love

ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

ಸುರತ್ಕಲ್: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ದ್ವಿಚಕ್ರ ವಾಹನ ಬೆನ್ನಟ್ಟಿದ್ದ ಪೊಲೀಸ್ ಸಿಬ್ಬಂದಿ ಬಸ್ ಹತ್ತಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದರೆನ್ನಲಾಗಿದೆ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಬೆನ್ನಟ್ಟಿ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನು ಗಮನಿಸಿದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದರುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.


Spread the love
Subscribe
Notify of

0 Comments
Inline Feedbacks
View all comments