Spread the love
ಸುಳ್ಯ ಚೆನ್ನಕೇಶ್ವರ ದೇವಸ್ಥಾನ ಜಾತ್ರೆ: ಮದ್ಯದಂಗಡಿ ಮುಚ್ಚಲು ಆದೇಶ
ಮಂಗಳೂರು: ಸುಳ್ಯ ತಾಲೂಕಿನ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಜ.10 ರಂದು ವಾರ್ಷಿಕ ಜಾತ್ರೋತ್ಸವ ಬ್ರಹ್ಮರಥೋತ್ಸವ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಈ ಸಂದರ್ಭದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಜನವರಿ 10 ರಂದು ಬೆಳಗ್ಗೆ 6 ಗಂಟೆಯಿಂದ ಜನವರಿ 11ರ ಬೆಳಗ್ಗೆ 6 ಗಂಟೆಯ ತನಕ ಸುಳ್ಯ ಕಸಬಾ ಗ್ರಾಮದ ಎಲ್ಲಾ ರೀತಿಯ ಮದ್ಯದ ಅಂಗಡಿಗಳು,ಬಾರ್ ಆ್ಯಂಡ್ ರೆಸ್ಟೋರೆಂಟ್‍ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
Spread the love