ಸೆ.27 ರ0ದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಫಲಾನುಭವಿಗಳೊಂದಿಗೆ ಸಂವಾದ

Spread the love

ಸೆ.27 ರ0ದು ಜನಮನ ಕಾರ್ಯಕ್ರಮ: ಉಸ್ತುವಾರಿ ಸಚಿವರಿಂದ ಫಲಾನುಭವಿಗಳೊಂದಿಗೆ ಸಂವಾದ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪ0ಚಾಯತ್, ಮತ್ತು ವಾರ್ತಾ ಮತ್ತು ಸಾರ್ವಜನಿಕ ಸ0ಪರ್ಕ ಇಲಾಖೆ ಸಹಯೋಗದೊ0ದಿಗೆ ಸೆಪ್ಟಂಬರ್ 27 ರ0ದು ನಗರದ ಪುರಭವನದಲ್ಲಿ ಜನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರಾಜ್ಯ ಸರ್ಕಾರವು 3 ವರ್ಷ ಅವಧಿಯಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಆ ಯೋಜನೆಗಳಿ0ದ ಫಲ ಪಡೆಯುತ್ತಿರುವ ಫಲಾನುಭವಿಗಳೊ0ದಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈಯವರು ನೇರವಾಗಿ ಸ0ವಾದ ನಡೆಸಲಿದ್ದಾರೆ.
ಅನ್ನಭಾಗ್ಯ, ಕ್ಷೀರಭಾಗ್ಯ, ಹೈನುಗಾರರಿಗೆ ಪ್ರತೀ ಲೀಟರ್ ಹಾಲಿಗೆ ರೂ. 4 ಸಬ್ಸಿಡಿ, ವಿದ್ಯಾಸಿರಿ, ಮತ್ಸ್ಯಾಶ್ರಯ, ಮನಸ್ವಿನಿ, ಮೈತ್ರಿ, ಬಿದಾಯಿ, ಮುಖ್ಯಮಂತ್ರಿ ಹರೀಶ್ ಸಾಂತ್ವನ ಯೋಜನೆ, 94ಸಿ ಹಕ್ಕುಪತ್ರ ಯೋಜನೆ ಸೇರಿದಂತೆ ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಕಳೆದ ಮೂರು ವರ್ಷಗಳಲ್ಲಿ ಜಾರಿಗೆ ತರಲಾಗಿದೆ. ಅರಕಾರ ಅನುಷ್ಠಾನಗೊಳಿಸಿದ ಈ ಯೋಜನೆಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುತ್ತಿವೆಯೇ, ಇವುಗಳನ್ನು ಇನ್ನಷ್ಟು ಜನರಿಗೆ ಹೇಗೆ ತಲುಪಿಸಬಹುದು, ಯೋಜನೆಯನ್ನು ಪರಿಣಾಮಕಾರಿಯಾಗಿ ಹೇಗೆ ಮಾಡಬಹುದು ಎಂಬುದರ ಬಗ್ಗೆ ಫಲಾನುಭವಿಗಳಿಂದಲೇ ನೇರವಾಗಿ ಕೇಳಿ ತಿಳಿದುಕೊಳ್ಳಲು ಈ ಜನಮನ ಕಾರ್ಯಕ್ರಮವನ್ನು ಸರಕಾರ ಏರ್ಪಡಿಸುತ್ತಿದೆ.

ಈ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳು ಆಗಮಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ವೇದಿಕೆಯಲ್ಲಿಯೇ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲಿದ್ದಾರೆ.

ಜನಮನ ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಿ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಸೆಪ್ಟಂಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ಪುರಭವನದಲ್ಲಿ ಜನಮನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ಶಾಸಕ ಜೆ.ಆರ್.ಲೋಬೋ ಅಧ್ಯಕ್ಷತೆ ವಹಿಸಲಿದ್ದಾರೆ. ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ.ಖಾದರ್ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ವಿವಿಧ ನಿಗಮ, ಅಕಾಡಮಿ, ಮಂಡಳಿಗಳ ಅಧ್ಯಕ್ಷರು, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ವಾರ್ತಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love