ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್

Spread the love

ಸೊಳ್ಳೆ ನಿರ್ಮೂಲನೆಯಿಂದ ಡೆಂಗ್ಯೂ ನಿಯಂತ್ರಣ : ಸಚಿವ ದಿನೇಶ್ ಗುಂಡೂರಾವ್

ಮಂಗಳೂರು:  ಸೊಳ್ಳೆ ಉತ್ಪತ್ತಿಗೆ ಕಾರಣವಾಗುವ ಅಂಶಗಳ ಬಗ್ಗೆ ಸಾರ್ವಜನಿಕರು ಜಾಗೃತಿ ವಹಿಸಿದರೆ ಡೆಂಗ್ಯೂ ನಿಯಂತ್ರಣ ಸಾಧ್ಯ ಎಂದು ಆರೋಗ್ಯ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಅವರು ಶುಕ್ರವಾರ ನಗರದ ಕೋಡಿಕಲ್ ನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಪ್ರತಿ ಶುಕ್ರವಾರ ನಡೆಯುತ್ತಿರುವ “ಈಡೀಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನ” ಕಾರ್ಯಕ್ರಮದಲ್ಲಿ ಮಾತನಾಡಿದರು. ಸೊಳ್ಳೆ ಉತ್ಪತ್ತಿಯಾದಷ್ಟು ಡೆಂಗ್ಯೂ ರೋಗದ ಅಪಾಯ ಜಾಸ್ತಿ, ಈ ನಿಟ್ಟಿನಲ್ಲಿ ನೀರು ನಿಲ್ಲುವ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಮನೆಯ ಸುತ್ತಮುತ್ತ ನೀರು ನಿಲ್ಲುವ ಸ್ಥಳಗಳು ಹೆಚ್ಚಾಗಿ ಕಂಡುಬರುತ್ತದೆ ಎಂದು ಸಚಿವರು ತಿಳಿಸಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಈ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲು ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಐವನ್ ಡಿ’ ಸೋಜಾ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ. ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಸ್ವಾಗತಿದರು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕಾರ್ಯಕ್ರಮವನ್ನು ನಿರೂಪಿಸಿದರು.


Spread the love