Home Mangalorean News Kannada News ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ವಂಚನೆ – ಆರೋಪಿಯ ಬಂಧನ

ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ವಂಚನೆ – ಆರೋಪಿಯ ಬಂಧನ

Spread the love
RedditLinkedinYoutubeEmailFacebook MessengerTelegramWhatsapp

ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ವಂಚನೆ – ಆರೋಪಿಯ ಬಂಧನ

ಮಂಗಳೂರು: ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ 7 ಲಕ್ಷ ವಾಹನ ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪಂಪ್ ವೆಲ್ ನಿವಾಸಿ ಬಶೀರ್ ಯಾನೆ ಹಸನ್ ಬಶೀರ್ (42) ಎಂದು ಗುರುತಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಇರುವ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ 7 ಲಕ್ಷ ವಾಹನ ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಿನಾಂಕ 5/11/2019 ರಂದು ಕಲಂ 420,468 ಯಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಶೀರ್ ಯಾನೆ ಹಸನ್ ಬಶೀರ್ ಎಂಬಾತನನ್ನು ಬಂಧಿಸಿ ವಿಚಾರಣೆ ಮಾಡಲಾಗಿ ಈತನು CARVAN AUTOMOBILES” ವಿವಿಧ ಕಂಪೆನಿಯ ಕಾರು ಮಾರಾಟಗಾರರು ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ಮಾಡಿಕೊಂಡಿದ್ದು, ಅದರ ಹೆಸರಿನಲ್ಲಿ ನಕಲಿ ದಾಖಲಾತಿ ನೀಡಿ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ಸಾಲ ಪಡೆದು ವಂಚಿಸಿರುವುದಾಗಿದೆ. ಅಲ್ಲದೇ ಸದರಿ ಬಶೀರ್ ರವರು “CARVAN AUTOMOBILES” ಎಂಬ ಅಸ್ತಿತ್ವದಲ್ಲಿರುವ ಕಾರು ಮಾರಾಟ ಸಂಸ್ಥೆಯ ಹೆಸರಿನಲ್ಲಿ ಮಂಗಳೂರು, ಬಂಟ್ವಾಳ, ವಿಟ್ಲ, ಮೂಡಬಿದ್ರೆ ವಿವಿಧ ಬ್ಯಾಂಕ್ ಗಳಿಗೆ ಬೇರೆಯವರ ಹೆಸರಿನಲ್ಲಿ ಕೊಟೇಶನ್ ನೀಡಿ ಸುಮಾರು 2 ಕೋಟಿ ರೂಪಾಯಿ ಅಧಿಕ ಹಣ ಪಡೆದಿರುವ ಮಾಹಿತಿ ತಿಳಿದು ಬಂದಿದ್ದು, ತನಿಖೆ ಮುಂದುವರಿದಿರುತ್ತದೆ.


Spread the love
RedditLinkedinYoutubeEmailFacebook MessengerTelegramWhatsapp

Exit mobile version