Home Mangalorean News Kannada News ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರ ಯೋಚಿಸಬೇಕು‌: ಸಿಎಂ ಸಿದ್ದರಾಮಯ್ಯ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರ ಯೋಚಿಸಬೇಕು‌: ಸಿಎಂ ಸಿದ್ದರಾಮಯ್ಯ

Spread the love

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರ ಯೋಚಿಸಬೇಕು‌: ಸಿಎಂ ಸಿದ್ದರಾಮಯ್ಯ

ಮಂಗಳೂರು: ಹಲವು ಸಮಯದಿಂದ ಬಾಕಿ ಇರುವ ನಿಗಮ – ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಅವರು ಮಾತನಾಡಿದರು. ಗೃಹ ಸಚಿವ‌ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ಅದಕ್ಕೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು‌ ಎಂದರು.

ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ನಾನು 1983ರಲ್ಲಿ ಶಾಸಕನಾಗಿ,‌ ನಂತರ ಸಚಿವ ನಾದವನು. ಹರೀಶ್ ಪೂಂಜ ಇನ್ನೂ ಬಚ್ಚಾ ಎಂದು ಹೇಳಿದರು.


Spread the love

Exit mobile version