Home Mangalorean News Kannada News ಸ್ವಚ್ಛತೆ ಅರಿವು ಮೂಡಿಸಲು ಯುಗಪುರುಷ ನಾಟಕ ಪ್ರದರ್ಶನ

ಸ್ವಚ್ಛತೆ ಅರಿವು ಮೂಡಿಸಲು ಯುಗಪುರುಷ ನಾಟಕ ಪ್ರದರ್ಶನ

Spread the love

ಸ್ವಚ್ಛತೆ ಅರಿವು ಮೂಡಿಸಲು ಯುಗಪುರುಷ ನಾಟಕ ಪ್ರದರ್ಶನ

ಮ೦ಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಮತ್ತು ಸ್ವಚ್ಛ ಭಾರತ್ ಮಿಷನ್ ಮಂಗಳೂರು ಇದರ ಸಂಯುಕ್ತಾ ಆಶ್ರಯದಲ್ಲಿ ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು `ಯುಗಪುರುಷ’ ನಾಟಕವು ಪ್ರದರ್ಶನವು ಪುರಭವನದಲ್ಲಿ ನಡೆಯಿತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಆರ್.ರವಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತಿ ಸದಸ್ಯೆ ಮಮತಾ ಗಟ್ಟಿ, ಮಂಗಳೂರು ತಾಲೂಕು ಪಂಚಾಯತಿಯ ಅಧ್ಯಕ್ಷ ಮುಹಮ್ಮದ್ ಮೋನು, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಸುರೇಖಾ, ಎಸ್.ಎಲ್ ಆನಂದ್, ದ.ಕ ಜಿ.ಪಂ ಉಪಕಾರ್ಯದರ್ಶಿ ಎನ್.ಆರ್.ಉಮೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ, ಅಲ್ಪಸಂಖ್ಯಾತರ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು , ಲೇಡಿಗೋಷನ್ ತರಬೇತಿ ನರ್ಸಿಂಗ್ ಸಿಬ್ಬಂದಿ ಸೇರಿದಂತೆ ಸುಮಾರು ೮೦೦ಕ್ಕಿಂತಲೂ ಅಧಿಕ ಮಂದಿ ನಾಟಕ ವೀಕ್ಷಿಸಿದರು.


Spread the love

Exit mobile version