ಸ್ವಯಂ ಉದ್ಯೋಗ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ
ಮಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು, 2018-19ನೇ ಸಾಲಿಗೆ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ ಹಾಗೂ ಮೈಕ್ರೋಕ್ರೆಡಿಟ್ ಯೋಜನೆಗಳಡಿಯಲ್ಲಿ ಸ್ವಯಂ ಉದ್ಯೋಗ ಕಾರ್ಯಕ್ರಮಗಳಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಸೆಪ್ಟಂಬರ್ 6 ರಿಂದ ಅಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 6. ನಿಗಮದಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು
ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು ಹಾಗೂ ಕಳೆದ ಕನಿಷ್ಟ 15 ವರ್ಷಗಳಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು 18 ವರ್ಷದಿಂದ 60 ವರ್ಷದೊಳಗಿನ ವಯೋಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶವಾದಲ್ಲಿ ರೂ.1,50,000/- ಹಾಗೂ ನಗರ ಪ್ರದೇಶವಾದಲ್ಲಿ ರೂ.2,00,000/- ಮಿತಿಯೊಳಗಿರಬೇಕು. ಅರ್ಜಿದಾರರ ಕುಟಂಬದ ಯಾವುದೇ ಸದಸ್ಯರು ಸರ್ಕಾರಿ / ಅರೆ ಸರ್ಕಾರ ಸಂಸ್ಧೆಯಲ್ಲಿ ನೌಕರಿಯಲ್ಲಿರಬಾರದು. ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.
ಜಿಲ್ಲೆಯಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಈಗಾಗಲೇ ನೊಂದಣಿ ಮಾಡಿಕೊಂಡಿರುವ ಪರಿಶಿಷ್ಟ ಪಂಗಡದ ಅಂಗವಿಕಲ ಫಲಾನುಭವಿಗಳ ಲಭ್ಯವಿರುವ ಪಟ್ಟಿಯಿಂದ ಅಂಗವಿಕಲರನ್ನು ನೇರವಾಗಿ ಸಂದರ್ಶನ ಮಾಡಿ ಶೇ.5ರಷ್ಟು ಮೀಸಲಾತಿಯನ್ನು ನೀಡಿ ಸೌಲಭ್ಯ ಕಲ್ಪಿಸಲಾಗುವುದು. ವಾಹನಗಳಿಗೆ ಸೌಲಭ್ಯ ಪಡೆಯಲು ಫಲಾಪೇಕ್ಷಿಗಳು ಡ್ರೈವಿಂಗ್ ಲೈಸೆನ್ಸ್ನೊಂದಿಗೆ ಬ್ಯಾಡ್ಜ್ ಅನ್ನೂ ಹೊಂದಿರಬೇಕು.
ಫಲಾಪೇಕ್ಷಿಯು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು: ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ , ಜಾತಿ ಪ್ರಮಾಣ ಪತ್ರ , ಕುಟುಂಬದ ವಾರ್ಷಿಕ ವರಮಾನ ಪತ್ರ , ಪಡಿತರ ಚೀಟಿ / ಆಧಾರ್ ಕಾರ್ಡ್, ಅರ್ಜಿದಾರರು ಹೊಂದಿರುವ ಬ್ಯಾಂಕ್ ಉಳಿತಾಯ ಖಾತೆಯ ವಿವರಗಳನ್ನೊಳಗೊಂಡ ಪಾಸ್ ಬುಕ್ನ ಮೊದಲ ಪುಟದ ಪ್ರತಿ. ಯೋಜನಾ ವರದಿ / ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ) ವಾಹನವಾಗಿದ್ದಲ್ಲಿ, ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪಡೆದ ವಾಹನ ಚಾಲನ ಪರವಾನಗಿ ಮತ್ತು ಬ್ಯಾಡ್ಜ್ನ ಪ್ರತಿ, ವಯಸ್ಸು 50 ವರ್ಷದೊಳಗಿರುವ ಬಗ್ಗೆ ದೃಢೀಕರಣ ಪತ್ರ.
ಸ್ವಯಂ ಉದ್ಯೋಗ ಕಾರ್ಯಕ್ರಮ :- ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಉದ್ಯಮ ಶೀಲತಾ ಅಭಿವೃದ್ದಿ ಯೋಜನೆಯಡಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳು ಬ್ಯಾಂಕ್ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿನ ಘಟಕ ವೆಚ್ಚ ಮತ್ತು ಸಹಾಯಧನದ ಮಿತಿ ರೂ. 5 ಲಕ್ಷ ಘಟಕ ವೆಚ್ಚದ ಶೇ.70 ರಷ್ಟು, ಗರಿಷ್ಠ ರೂ.3.50 ಲಕ್ಷ. ಘಟಕ ವೆಚ್ಚ : ರೂ 5 ಲಕ್ಷ ಮೇಲ್ಪಟ್ಟು 10 ಲಕ್ಷದ ವರೆಗೆ ಸಹಾಯಧನ ಘಟಕ ವೆಚ್ಚದ ಶೇ.60 ರಷ್ಟು, ಗರಿಷ್ಠ ರೂ. 5 ಲಕ್ಷ. ಘಟಕ ವೆಚ್ಚ : ರೂ 10 ಲಕ್ಷ ದಿಂದ ಮೇಲ್ಪಟು 20 ಲಕ್ಷದ ವರೆಗೆ ಸಹಾಯಧನ ಘಟಕ ವೆಚ್ಚದ ಶೇ. 50 ರಷ್ಟು, ಗರಿಷ್ಠ ರೂ.5 ಲಕ್ಷ. ಮೈಕ್ರೋ ಕ್ರೆಡಿಟ್ ಯೋಜನೆ : ಈ ಯೋಜನೆಯಡಿ ಸ್ವ ಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಪಂಗಡದ ಮಹಿಳಾ ಫಲಾಪೇಕ್ಷಿಗಳಿಗೆ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸ್ವಸಹಾಯ ಗುಂಪುಗಳಿಗೆ ಆರ್ಥಿಕ ನೇರವು ಒದಗಿಸಲಾಗುವುದು. ಘಟಕ ವೆಚ್ಚದಲ್ಲಿ ಸಹಾಯಧನ ಮತ್ತು ಸಾಲದ ಮೊತ್ತವನ್ನು ನಿಗಮದಿಂದಲೇ ನೀಡಲಾಗುವುದು. ಸಾಲದ ಹಣಕ್ಕೆ ಬಡ್ಡಿ ವಾರ್ಷಿಕ ಶೇ.4ರಷ್ಟಿದ್ದು, ಸಾಲದ ಹಣವನ್ನು ಬಡ್ಡಿ ಸಮೇತವಾಗಿ 36 ಮಾಸಿಕ ಸಮಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕು (ಕನಿಷ್ಟ 10 ಮಹಿಳಾ ಸದಸ್ಯರ ಸ್ವಸಹಾಯ ಗುಂಪಾಗಿರಬೇಕು). ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಕಛೇರಿಯಿಂದ ಹಾಗೂ ನಿಗಮದ ವೆಬ್ ಸೈಟ್ನಿಂದ ಪಡೆಯಬಹುದು.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳು ಆಯಾ ಜಿಲ್ಲೆಯ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಧಾಪಕರ ಕಛೇರಿಯಲ್ಲಿ ನಿಗದಿಪಡಿಸಿದ ಉಚಿತ ಅರ್ಜಿಗಳನ್ನು ಪಡೆಯಬಹುದು ಹಾಗೂ ನಿಗಮದ ವೆಬ್ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಞmvsಣಜಛಿಟ ಪ್ರಕಟಣೆ ಮೆನುವಿನಲ್ಲಿ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಕಚೇರಿಗೆ ಸೆಪ್ಟಂಬರ್ 6 ರಿಂದ ಅಕ್ಟೋಬರ್ 6 ರೊಳಗೆ ಸಲ್ಲಿಸುವುದು. ಅಂತಿಮ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸಂಪರ್ಕಿಸಬಹುದಾದ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: ಮಂಗಳೂರು 0824-2420114.
ಸ್ವಯಂ ಉದ್ಯೋಗ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ
Spread the love
Spread the love