ಸ್ವರ್ಣ ನದಿಯಲ್ಲಿ ಅಕ್ರಮ ಮರಳುಗಾರಿಕೆ – ಸರಕಾರದ ಗಮನ ಸೆಳೆಯಲು ಡಿ ಕೆ ಶಿವಕುಮಾರ್ ಗೆ ವಿಶ್ವಾಸ್ ಅಮೀನ್ ಮನವಿ
ಉಡುಪಿ: ಲಾಕ್ ಡೌನ್ ವೇಳೆ ಉಡುಪಿ ನಗರಕ್ಕೆ ನೀರು ಪೊರೈಸುವ ನೆಪದಲ್ಲಿ ಸ್ವರ್ಣ ನದಿಯಲ್ಲಿ ನಡೆದ ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರಿಗೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಮನವಿ ಸಲ್ಲಿಸಿದರು.
ಲಾಕ್ ಡೌನ್ ಸಂದರ್ಭದಲ್ಲಿ ಇಡೀ ದೇಶಾನೇ ಭಯದ ವಾತಾವರಣದಲ್ಲಿ ಇರುವಾಗ ಉಡುಪಿ ನಗರಕ್ಕೆ ನೀರು ಪೂರೈಸುವ ನೆಪದಲ್ಲಿ ಸ್ವರ್ಣ ನದಿಯ ಹೂಳೆತ್ತುವ ಕಾಮಗಾರಿಯಲ್ಲಿ ದೊಡ್ಡ ಮಟ್ಟದ ಅಕ್ರಮ ಮರುಗಾರಿಕೆ ಹಾಗೂ ಕಳ್ಳಸಾಗಣೆ ಹಗರಣ ಬಗ್ಗೆ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ರವರಿಗೆ ಸವಿಸ್ತಾರ ಮಾಹಿತಿಯನ್ನು ನೀಡಿ ರಾಜ್ಯ ಸರಕಾರದ ಹಾಗೂ ಮುಖ್ಯಮಂತ್ರಿಯವರಾದ ಬಿ ಎಸ್ ಯಡಿಯೂರಪ್ಪ ರವರ ಗಮನ ಸೆಳೆಯಬೇಕು ಹಾಗೂ ಹಗರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳು ಮತ್ತು ರಾಜಕಾರಣಿಗಳಿಗೆ ಶಿಕ್ಷೆ ಆಗಬೇಕೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್ ರವರು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಯೋಜಕರಾದ ಯೋಗೀಶ್ ನಯನ್ ಇನ್ನ ರವರು ಉಪಸ್ಥಿತರಿದ್ದರು.