Home Mangalorean News Kannada News ಹದಿನಾರು ಅಕಾಡೆಮಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ರಾಜ್ಯ ಸರ್ಕಾರ

ಹದಿನಾರು ಅಕಾಡೆಮಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ರಾಜ್ಯ ಸರ್ಕಾರ

Spread the love

ಹದಿನಾರು ಅಕಾಡೆಮಿಗಳಿಗೆ ಅಧ್ಯಕ್ಷರ ನೇಮಕ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಒಟ್ಟು 13 ಅಕಾಡೆಮಿಗಳು ಮತ್ತು 3 ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಟಿ.ಎಸ್​. ನಾಗಾಭರಣ ನೇಮಕವಾಗಿದ್ದಾರೆ.

ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಎನ್​.ಆರ್​. ವಿಶುಕುಮಾರ್​, ಕಬ್ಬಿನಾಲೆ ವಸಂತ ಭಾರದ್ವಾಜ ಸೇರಿ ಒಟ್ಟು 7 ಮಂದಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿರಲಿದ್ದಾರೆ.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರಕ್ಕೆ ಅಜರ್ಕಳ ಗಿರೀಶ್​ ಭಟ್​ ಅಧ್ಯಕ್ಷರಾಗಿದ್ದರೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷತೆಯ ಜವಾಬ್ದಾರಿ ಡಾ. ಎಂ.ಎನ್​. ನಂದೀಶ್​ ಹಂಜೆ ಅವರದ್ದಾಗಿದೆ. ಡಾ. ಬಿ.ವಿ. ವಸಂತ್​ಕುಮಾರ್​ ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುತ್ತಾರೆ.

ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಭೀಮಸೇನ, ಕರ್ನಾಟಕ ಸಂಗೀತ-ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಆನೂರು ಅನಂತಕೃಷ್ಣ ಶರ್ಮ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾಗಿ ವೀರಣ್ಣ ಅರ್ಕಸಾಲಿ, ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಿ. ಮಹೇಂದ್ರ, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿ ಎಂ.ಎ. ಹೆಗ್ಡೆ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಮಂಜಮ್ಮ ಜೋಗತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ದಯಾನಂದ ಕತ್ತಲಸರ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪಾರ್ವತಿ ಅಪ್ಪಯ್ಯ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ. ಜಗದೀಶ ಪೈ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ರಹೀಂ ಉಚ್ಚಿಲ, ಕರ್ನಾಟಕ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಸೊರಬಕ್ಕನವರ್​ ಹಾವೇರಿ ನೇಮಕಗೊಂಡಿದ್ದಾರೆ.


Spread the love

Exit mobile version