ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ

Spread the love

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಪಿಯ ಬಂಧನ

ಬೆಂಗಳೂರು: ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಆರೋಪಿಯನ್ನು ಕಾಟನ್ಪೇಟೆ ಪೊಲೀಸರು ಬಂಧಿಸಿದ್ದಾರೆ.

ಬಿಹಾರ ಮೂಲದ ಶೇಖ್ ನಸ್ರೂ(35) ಬಂಧಿತ ಆರೋಪಿ. ಮದ್ಯದ ನಶೆಯಲ್ಲಿ ಕೃತ್ಯ ನಡೆಸಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಕೃತ್ಯ ನಡೆದ ಸ್ಥಳದಿಂದ ಸುಮಾರು 50 ಮೀಟರ್ನಷ್ಟು ದೂರ ಇರುವ ಪ್ಲಾಸ್ಟಿಕ್ ಹಾಗೂ ಬ್ಯಾಗ್ ಹೊಲಿಗೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ನಸ್ರೂ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಪಶು ಆಸ್ಪತ್ರೆಯಲ್ಲಿ ಹಸುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮೂರು ಹಸುಗಳೂ ಪ್ರಾಣಾಪಾಯದಿಂದ ಪಾರಾಗಿವೆ ಎಂದು ತಿಳಿದು ಬಂದಿದೆ.

ಆರೋಪಿಯ ವಿರುದ್ಧ ಬಿಎನ್ಎಸ್ ಸೆಕ್ಷನ್ 325 ಅಡಿ ಪ್ರಕರಣ ದಾಖಲಿಸಲಾಗಿದ್ದು, ಜನವರಿ 24ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments