Spread the love
ಬ್ರಹ್ಮಾವರ: ಹಾಲು ಕರೆಯುತ್ತಿದ್ದ ವೇಳೆ ಗೋಡೆ ಕುಸಿದು ಮಹಿಳೆ ಮೃತ್ಯು
ಬ್ರಹ್ಮಾವರ: ದನದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದ ವೇಳೆ ಮಣ್ಣಿನ ಗೋಡೆ ಕುಸಿದು ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಮುಂಜಾನೆ ಚೇರ್ಕಾಡಿ ಗ್ರಾಮದ ಬೆನಗಲ್ ಎಂಬಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಕೊರಗ ಮರಕಾಲ ಎಂಬವರ ಪತ್ನಿ ಗಂಗಾ ಮರಕಾಲ್ತಿ(52) ಮೃತಪಟ್ಟವರು. ಇಂದು ಬೆಳಗ್ಗೆ 6:15ರ ಸುಮಾರಿಗೆ ಈ ಅವಘಡ ಸಂಭವಿಸಿದೆ.
ನಿರಂತರ ಮಳೆಯಿಂದ ತೊಯ್ದು ಶುಷ್ಕಗೊಂಡಿದ್ದ ಕೊಟ್ಟಿಗೆಯ ಮಣ್ಣಿನ ಗೋಡೆ ಹಠಾತ್ ಕುಸಿದು ಬಿದಿದ್ದೆ. ಈ ವೇಳೆ ದನದ ಹಾಲು ಕರೆಯುತ್ತಿದ್ದ ಗಂಗಾ ಅವರು ಗೋಡೆಯ ಅವಶೇಷಗಳಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪೇತ್ರಿಯ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಘಟನಾ ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಗ್ರಾಪಂ ಅಧ್ಯಕ್ಷರು ಭೇಟಿ ಪರಿಶೀಲನೆ ನಡೆಸಿದ್ದಾರೆ.
Spread the love