ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

Spread the love

ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಶನಿವಾರ ಮಹಾನಗರದ ಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ‘ಹಜ್ ಹೌಸ್’ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು ಕೊಟ್ಟು ಅವನ ಉದಾತ್ತೀಕರಣ ಮಾಡುವ ನಿರ್ಣಯವನ್ನು ಸರ್ಕಾರವು ರದ್ದು ಪಡಿಸಬೇಕು ಹಾಗೂ ಇನ್ನಿತರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯಿತು.

ಈ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಹಿಂದೂ ಜನಜಾಗೃತಿ ಸಮಿತಿಯ ಚಂದ್ರ ಮೊಗೇರ, ರಮೇಶ್ ನಾಯಕ್, ಲೀಲಾವತಿ, ಖೀಮಾರಾಮ್ ಚೌಧರಿ, ಉಪೇಂದ್ರ ಆಚಾರ್ಯ, ಪ್ರಭಾಕರ್ ನಾಯ್ಕ್, ಧರ್ಮಪ್ರೇಮಿಗಳಾದ ಮಧುಸೂಧನ್ ಅಯ್ಯರ್ ಮೊದಲಾದವರು ಉಪಸ್ಥಿತರಿದ್ದರು.


Spread the love