ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ನೇಮಕ

Spread the love

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ಎನ್ ಶಶಿಕುಮಾರ್ ನೇಮಕ

ಬೆಂಗಳೂರು: ರಾಜ್ಯ ಸರಕಾರ ಮಂಗಳವಾರ ತಡರಾತ್ರಿ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಹುಬ್ಬಳ್ಳಿ –ಧಾರವಾದ ಪೋಲಿಸ್ ಆಯುಕ್ತರಾಗಿ ಎನ್ ಶಶಿಕುಮಾರ್ ಅವರನ್ನು ನೇಮಕ ಮಾಡಿದೆ

2007 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಎನ್ ಶಶಿಕುಮಾರ್ ಅವರು ಪ್ರಸ್ತುತ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಎನ್ ಶಶಿಕುಮಾರ್ ಅವರು ತಮ್ಮ ದಕ್ಷ ಹಾಗೂ ಕಟ್ಟುನಿಟ್ಟಿನ ಆಡಳಿತಕ್ಕೆ ಹೆಸರಾಗಿದ್ದರು. ತಮ್ಮ ಜನ ಸ್ನೇಹಿ ಪೊಲೀಸ್ ಆಡಳಿತದಿಂದ ಮಂಗಳೂರಿನ ಜನರ ಮನಗೆದ್ದಿದ್ದ ಅವರನ್ನು ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ಆಯುಕ್ತರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.


Spread the love