ಹೊರಗುತ್ತಿಗೆ ನೌಕರರ ಮಾಹಿತಿ ನೀಡಲು ದ.ಕ. ಜಿಲ್ಲಾಧಿಕಾರಿ ಸೂಚನೆ
ಮಂಗಳೂರು : ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಆಯಾ ಕಚೇರಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ವಿವರಗಳನ್ನು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಶೀಘ್ರ ನೀಡಬೇಕು ಎಂದು ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ದ.ಕ.ಜಿಲ್ಲೆಯ ವಿವಿಧೋದ್ದೇಶಿತ ಕಾರ್ಮಿಕರ ಸಹಕಾರ ಸಂಘದ ಪೂರ್ವಭಾವಿ ಸಭೆಯು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿವಿಧೋದ್ದೇಶಿತ ಕಾರ್ಮಿಕರ ಸಹಕಾರ ಸಂಘದ ಸ್ಥಾಪನೆಯಿಂದ ಕಾರ್ಮಿಕರಿಗೆ ನ್ಯಾಯಸಿಗಲಿದೆ. ಸಂಘದ ನೋಂದಣಿಗೆ ಸಂಬಂಧಿಸಿದ ದಾಖಲೆಗಳು ಮತ್ತಿತ್ಯಾದಿ ವಿವರಗಳ ಸಂಕ್ಷಿಪ್ತ ಮಾಹಿತಿಯನ್ನು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ಸಲ್ಲಿಸಲು ಹಾಗೂ ಕ್ರೋಢೀಕೃತ ದಾಖಲೆಗಳನ್ನು ಸಿದ್ಧಪಡಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ದ.ಕ.ಜಿಪಂ ಸಿಇಒ ಡಾ. ಆನಂದ್ ಕೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಮಹಾ ನಗರಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.