ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 69 ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲು; ಡಿಸಿ ಜಗದೀಶ್

Spread the love

ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 69 ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲು; ಡಿಸಿ ಜಗದೀಶ್

ಉಡುಪಿ : ಉಡುಪಿ ಜಿಲ್ಲೆಗೆ ವಿದೇಶ ಹೊರರಾಜ್ಯಗಳಿಂದ ಬಂದಿರುವ ಹಾಗೂ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ 69 ವ್ಯಕ್ತಿಗಳು ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದು ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.

ಉಡುಪಿ ಜಿಲ್ಲೆಗೆ ವಿದೇಶ ಹೊರರಾಜ್ಯಗಳಿಂದ ಬಂದಿರುವ ವ್ಯಕ್ತಿಗಳು ಹಾಗೂ ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಹೋಂ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಅವರು 14 ದಿನ ಹೋಂ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯವಾಗಿರುತ್ತದೆ. ಆದರೆ ಸದರಿಯವರು ನಿಯಮ ಬಾಹಿರವಾಗಿ ಹೊರಗಡೆ ತಿರುಗುತ್ತಿರುವುದು ಕಂಡುಬಂದಿರುತ್ತದೆ. ಇದರಿಂದಾಗಿ ಕೋವಿಡ್ ರೋಗ ನಿಯಂತ್ರಣದಲ್ಲಿ ಹಿನ್ನಡೆಯಾಗುತ್ತಿದೆ, ಹೋಂ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘನೆ ಮಾಡುವವರ ವಿರುದ್ಧ ನಿಗಾ ಇಡಲು Quarantine Watch – App ತಂತ್ರಜ್ಞಾನದ ಬಳಕೆಯಾಗುತ್ತಿದ್ದು, ಇದರಿಂದಾಗಿ ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡುತ್ತಿರುವ ವ್ಯಕ್ತಿಗಳ ಮಾಹಿತಿ ಲಭ್ಯವಾಗುತ್ತದೆ.

ಅಂತಹವರ ವಿರುದ್ಧ ಈಗಾಗಲೇ ಅಧಿಕಾರಿಗಳು ಅವರ ಮನೆ ಭೇಟಿ ಮಾಡಿ ಎಚ್ಚರಿಕೆ ಗಳನ್ನು ಕೊಟ್ಟು ಹೊರಗೆ ತಿರುಗಾಟ ನಡೆಸದಂತೆ ಮನವರಿಕೆ ಮಾಡಿದರು ಕೂಡ ನಿಯಮಗಳನ್ನು ಪಾಲಿಸದೇ ಪುನರಪಿ ಉಲ್ಲಂಘನೆ ಮಾಡಿರುವ ಒಟ್ಟು 69 ವ್ಯಕ್ತಿಗಳ ವಿರುದ್ಧ FIR ದಾಖಲಿಸಲಾಗಿದೆ. ಹೋಂ ಕ್ಯಾರಂಟೈನ್ ಹಾಗೂ ಹೋಂ ಐಸೋಲೇಷನ್ ನಲ್ಲಿರುವ ಯಾರೂ ಕೂಡ ಹೋಂ ಕ್ವಾರಂಟೈನ್ ಉಲ್ಲಂಘನೆ ಮಾಡಿ ಹೊರಗಡೆ ತಿರುಗಾಟ ನಡೆಸಬಾರದಾಗಿ ಎಚ್ಚರಿಕೆ ನೀಡಲಾಗಿದೆ.ಒಂದು ವೇಳೆ ಉಲ್ಲಂಘನೆ ಮಾಡಿದ್ದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.


Spread the love